ಬೆಂಗಳೂರಿನ ಮಂಗನಹಳ್ಳಿ ಬ್ರಿಡ್ಜ್ ಬಳಿ ನಿನ್ನೆ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ತಂದೆ ಸಾವನ್ನಪ್ಪಿ, ಮಗಳು ಚೈತನ್ಯಾಗೆ ಗಂಭೀರ ಗಾಯಗಳಾಗಿತ್ತು. ಆದರೆ ತಡರಾತ್ರಿ ಚೈತನ್ಯಾ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಮಗಳ ಮದುವೆಗೆ ಕಲ್ಯಾಣ ಮಂಟಪ ಬುಕ್ ಮಾಡಿ ಬರುವಾಗ ಘಟನೆ ನಡೆದಿತ್ತು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚೈತನ್ಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪತಿ ಹಾಗೂ ಮಗಳನ್ನು ಕಳೆದುಕೊಂಡ ರತ್ನಮ್ಮಾ ಆಘಾತಕ್ಕೆ ಒಳಗಾಗಿದ್ದಾರೆ. ಘಟನೆಯನ್ನು ಖಂಡಿಸಿ ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಘಟನೆಗೆ ಕಾರಣರಾದ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದಾರೆ. ಕೇವಲ 10 ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇಡೀ ಕುಟುಂಬದಲ್ಲಿ ಉಳಿದಿರುವುದೇ ಓರ್ವ ಗೃಹಿಣಿ. ಚೈತನ್ಯಾ ತಾಯಿ ವೃದ್ಧೆ, ಆಕೆಯ ಜೀವನಕ್ಕೆ ಆಧಾರ ಕಲ್ಪಿಸಬೇಕಿದೆ. ಒಂದು ಕೋಟಿ ಪರಿಹಾರ ಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಆದರೆ ತಂದೆ ಮಗಳು ಸಾವನ್ನಪ್ಪಿರುವ ಕಾರಣಕ್ಕಾಗಿ ತಲಾ 10 ಲಕ್ಷ ರು ಪರಿಹಾರ ನೀಡುವುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ವಿಧಾನ ಸಭೆಯಲ್ಲಿ ಪ್ರಕಟಿಸಿದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ