April 6, 2025

Newsnap Kannada

The World at your finger tips!

drugs , ganja , smuggling

ಆನೇಕಲ್‌ನಲ್ಲಿ ಇಬ್ಬರು ಯುವಕರ ಅನುಮಾನಾಸ್ಪದ ಸಾವು – ಡ್ರಗ್ಸ್ ಓವರ್ ಡೋಸ್ ಶಂಕೆ

Spread the love

ಬೆಂಗಳೂರು: ನಗರ ಹೊರವಲಯದ ಆನೇಕಲ್‌ನಲ್ಲಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಡ್ರಗ್ಸ್ ಓವರ್ ಡೋಸ್ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯಾರಂಡಹಳ್ಳಿ ಸಮೀಪ ವಾಸವಿದ್ದ ಅಸ್ಸಾಂ ಮೂಲದ ದಿವಾನ್ ಅಫ್ರೀದಿ ಅಲಿ ಮತ್ತು ಅಶ್ರಫ್ ಅಲಿ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಯಾರಂಡಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಅವರು ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅವರಲ್ಲಿ ಒಬ್ಬರು ಮಲಗಿದ್ದಲ್ಲೇ ಕೊನೆಯುಸಿರೆಳೆದರೆ, ಮತ್ತೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಇದನ್ನು ಓದಿ –ಸುರಿಯುವ ಮಳೆಯ ನಿಲ್ಲಿಸಲಾರೆ

ಘಟನಾ ಸ್ಥಳಕ್ಕೆ ಅಡಿಷನಲ್ ಎಸ್‌ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!