ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಓರ್ವ ರೋಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದೆ.
ಮಹೇಶ್ (36) ಮೃತ ದುರ್ದೈವಿ. ಎದೆ ನೋವು ಸಮಸ್ಯೆಯಿಂದ ಬೆಳಗ್ಗೆ ತೆರಕಣಾಂಬಿ ಆಸ್ಪತ್ರೆಗೆ ಮಹೇಶ್ ಬಂದಿದ್ದರು.ಇದನ್ನು ಓದಿ –ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಸಚಿವ ಸ್ಥಾನ ಭರ್ತಿಗೆ ಸಿಎಂ ಸಿದ್ದತೆ
ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ, ಚಿಕಿತ್ಸೆಯೂ ಇಲ್ಲದೇ ವ್ಯಕ್ತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಶವದ ಜೊತೆಗೆ ರಸ್ತೆ ತಡೆ ನಡೆಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯು ತೆರಕಣಾಂಬಿ ಗ್ರಾಮದ ನಿವಾಸಿ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಬರುವಂತೆ ಆಗ್ರಹಿಸುತ್ತಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ