ರಾಜ್ಯದಲ್ಲಿ 11,133 ಗುತ್ತಿಗೆ ಪೌರ ಕಾರ್ಮಿಕ ಸೇವೆ ಕಾಯಂಗೆ ನಿರ್ಧಾರ

Team Newsnap
1 Min Read

ರಾಜ್ಯದ 11,133 ಗುತ್ತಿಗೆ ಪೌರಕಾರ್ಮಿಕರಿಗೆ ಸರ್ಕಾರಿ ಕೆಲಸ ಕಾಯಂ ಮಾಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್‌ ನೀಡಿದೆ. SC/ST, BPL ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ಒಪ್ಪಿಗೆ ನೀಡಿದೆ. ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆಯ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1,927 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳಲಾವುದು.

SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು

ಈ ಎಲ್ಲಾ ವಿಷಯದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

Share This Article
Leave a comment