ಬೆಂಗಳೂರು, ಫೆಬ್ರವರಿ 28: ರಾಜ್ಯದ ಪ್ರಮುಖ ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ‘ಅಖಂಡ ಕರ್ನಾಟಕ ಬಂದ್’ ನಡೆಸುವ ನಿರ್ಧಾರ ಕೈಗೊಂಡಿವೆ. ಕನ್ನಡ ಒಕ್ಕೂಟ-ಕರ್ನಾಟಕ ರಾಜ್ಯದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕನ್ನಡ ಪರ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದು, ರಾಜ್ಯದ ಹಿತಾಸಕ್ತಿಗಾಗಿ ಬಂದ್ ನಡೆಸಲು ಮುಂದಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ – ಗಂಭೀರ ನಿರ್ಧಾರ
ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಹಾಗೂ ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ತೋರಿದ ಘಟನೆಗೆ ಪ್ರತಿಯಾಗಿ ಕನ್ನಡ ಪರ ಸಂಘಟನೆಗಳು ದೊಡ್ಡ ಮಟ್ಟದ ನಿರ್ಧಾರ ಕೈಗೊಂಡಿವೆ. ಕನ್ನಡಿಗರ ಹಿತರಕ್ಷಣೆಗೆ ಹಾಗೂ ಮಹಾರಾಷ್ಟ್ರದ ಅಟ್ಟಹಾಸಕ್ಕೆ ತಕ್ಕ ಉತ್ತರ ನೀಡಲು ಬೆಂಗಳೂರು ನಗರದಲ್ಲಿ ಇಂದು (ಫೆಬ್ರವರಿ 28) ಮಹತ್ವದ ಸಭೆ ಆಯೋಜಿಸಲಾಗಿತ್ತು.
ಈ ಸಭೆಯಲ್ಲಿ ಒಕ್ಕೋಟದ ಅಧ್ಯಕ್ಷ ಮತ್ತು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಚರ್ಚೆ ನಡೆಯಿತು. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವ ಸಲುವಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಈ ಬಂದ್ ಕರೆಗೆ ಕರೆ ನೀಡಲಾಗಿದೆ.
ಬಂದ್‌ಗಾಗಿ ಕನ್ನಡಪರ ಸಂಘಟನೆಗಳ ಏಕತಾನಿರ್ಧಾರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, “ಈ ಬಾರಿ ಎಲ್ಲ ಕನ್ನಡಪರ ಸಂಘಟನೆಗಳ ಅಭಿಪ್ರಾಯ ಪಡೆದು, ಅವರ ಸಲಹೆ ಮೇರೆಗೆ ಬಂದ್ ಮಾಡಲಾಗುತ್ತಿದೆ. ಹಿಂದಿನ ಬಾರಿ ಕೆಲವು ಸಂಘಟನೆಗಳು ಬೆಂಬಲಿಸದೆ ಇದ್ದರೂ, ಈ ಬಾರಿ ಅಂತಹ ಪರಿಸ್ಥಿತಿ ಉಂಟಾಗುವುದಿಲ್ಲ” ಎಂದು ತಿಳಿಸಿದರು.
ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮುಖಂಡ ನಾರಾಯಣ ಗೌಡ, ಪ್ರವೀಣ್ ಶೆಟ್ಟಿ ಹಾಗೂ ಇತರ ಪ್ರಮುಖ ಕನ್ನಡಪರ ನಾಯಕರು ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ನಾಯಕರು ಒಗ್ಗಟ್ಟಿನಿಂದ ಬಂದ್ ನಡೆಸಲು ಒಪ್ಪಿಗೆ ವ್ಯಕ್ತಪಡಿಸಿದ್ದಾರೆ.ಇದನ್ನು ಓದಿ –ನಾಳೆಯಿಂದ ಆರಂಭವಾಗುವ ದ್ವಿತೀಯ PUC ಪರೀಕ್ಷೆ – ಸಂಪೂರ್ಣ ಮಾಹಿತಿ ಇಲ್ಲಿದೆ!
ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರ ಬೀಳಲಿದ್ದು, ರಾಜ್ಯದ ಜನತೆಗೆ ಬಂದ್ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು