Karnataka

ಸರಳ ಅಲ್ಲ , ಸಂಪ್ರದಾಯಕ ದಸರಾ ಆಚರಣೆಗೆ ನಿರ್ಧಾರ – ಡಾ ಮಹದೇವಪ್ಪ

ಮೈಸೂರು : ದಸರಾ ಆಚರಣೆಯಲ್ಲಿ ಹಮ್ಮಿಕೊಳ್ಳುವ ಪ್ರತಿಯೊಂದು ಕಾರ್ಯಕ್ರಮವು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಇರಬೇಕು. ಈ ಬಾರಿ ಅದ್ಧೂರಿಯಲ್ಲದ ಹಾಗೂ ಸರಳವೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ಶನಿವಾರ ತಿಳಿಸಿದರು.

ಮೈಸೂರು ಅರಮನೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆಯ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಹದೇವಪ್ಪ ಅವರು ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಪರಂಪರೆಯನ್ನು ಬಿಂಬಿಸುವ ರೀತಿ ಇರಬೇಕು. ಕವಿಗೋಷ್ಠಿಯಲ್ಲಿ ಸಂವಿಧಾನ, ಗಣರಾಜ್ಯ, ಕರ್ನಾಟಕ ಏಕೀಕರಣ, ಮೈಸೂರು ಅರಸರ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹಾಸ್ಯ ಬರಿತವಾಗಿ ಇರಬೇಕು. ಆಹಾರ ಮೇಳದಲ್ಲಿ ದೇಶೀಯ ಆಹಾರ ಪದ್ಧತಿಯ ಆಹಾರಗಳನ್ನು ನೀಡಬೇಕು ಅಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ಲಾಸ್ಟಿಕ್ ಮುಕ್ತ ದಸರಾ ಆಚರಣೆ ಮಾಡಬೇಕು. ದಸರಾ ಚಲನ ಚಿತ್ರೋತ್ಸವದಲ್ಲಿ ಸಾಮಾಜಿಕ ಸಂದೇಶ ಸಾರುವ ಚಿತ್ರಗಳನ್ನು ಪ್ರದರ್ಶನ ಮಾಡಬೇಕು. ಯುವ ನಿರ್ದೇಶಕರಿಗೆ ಉತ್ತೇಜನ ನೀಡುವಂತೆ ಇರಬೇಕು. ಕಿರು ಚಿತ್ರಗಳ ಸ್ಪರ್ದೆ ಏರ್ಪಡಿಸೇಕು ಎಂದು ತಿಳಿಸಿದರು.

ಫಲಪುಷ್ಪ ಪ್ರದರ್ಶನ ಆಕರ್ಷಣೀಯವಾಗಿ ಇರಬೇಕು. ಹಣ್ಣು ಮೇಳದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಬೆಳೆಯುವ ಹಣ್ಣುಗಳ ಪ್ರದರ್ಶನ ಆಗಬೇಕು. ರೈತರಿಂದ ನೇರವಾಗಿ ಹಣ್ಣುಗಳ ಖರೀದಿ ಅಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ, ವಿವಿಧ ಜಿಲ್ಲೆಗಳಿಂದ ಸ್ಥಬ್ದ ಚಿತ್ರಗಳು ಬರುತ್ತವೆ. ದಸರಾ ಆಚರಣೆಯ ಮೊದಲ ದಿನವೇ ಎಲ್ಲಾ ಸ್ಟಾಲ್ ಗಳು ತೆರೆಯಬೇಕು. ಪಾರ್ಕಿಂಗ್ ವ್ಯವಸ್ಥೆ ಸಮರ್ಪಕವಾಗಿ ಇರಬೇಕು ಎಂದು ಸೂಚನೆ ನೀಡಿದರು.ಕಾವೇರಿ ನದಿ ನೀರಿನ ಹಂಚಿಕೆ: ರಾಜ್ಯದ ರೈತರ ಹಿತ ಕಾಪಾಡುವುದು ಮುಖ್ಯ – ಎಚ್ ಡಿ ಕೆ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತ ಬಿ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಶಿವರಾಜ್, ದಸರಾ ಉಪಸಮಿತಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Team Newsnap
Leave a Comment

Recent Posts

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024