PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ನಿರ್ಧಾರ

Team Newsnap
1 Min Read
Decision of Department of Education not to receive a report from Chakrateerta Committee

ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಆರುವ ಮುನ್ನವೇ ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚನೆಯ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದು ಸಮಿತಿಯನ್ನು ವಿಸರ್ಜಿಸಿದೆ.

ಇದನ್ನು ಓದಿ –ಸ್ವಂತ ಬಲ, ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ತರುವುದೇ BSYಶಪಥ – ವಿಜಯೇಂದ್ರ

ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಿದ್ದ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿಯ `ಹೊಸ ಧರ್ಮಗಳ ಉದಯ’ ಪಠ್ಯ ಮಾತ್ರ ಪರಿಷ್ಕರಣೆಗೆ ವಹಿಸಿತ್ತು.

ಶಾಲಾ ಪಠ್ಯ ಪುಸ್ತಕ ಗೊಂದಲ ಆದ ಹಿನ್ನಲೆಯಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ ಕೈ ಬಿಡಲು ತೀರ್ಮಾನಿಸಿ, ರೋಹಿತ್ ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿ ದ್ವಿತೀಯ ಪಿಯುಸಿಯ ಇತಿಹಾಸದ ಒಂದು ಪಠ್ಯವನ್ನು ಪರಿಷ್ಕರಣೆಗಾಗಿ ಸಮಿತಿಗೆ ನೀಡಲಾಗಿತ್ತು. ಈಗಾಗಲೇ ಮುಖ್ಯಮಂತ್ರಿಗಳು ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದ್ದಾರೆ. ಹೀಗಾಗಿ ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯೂ ವಿಸರ್ಜನೆ ಆಗಿದೆ
ಎಂದರು

ರೋಹಿತ್ ಚಕ್ರತೀರ್ಥ ಸಮಿತಿಯಿಂದ ವರದಿ ಸ್ವೀಕಾರ ಮಾಡುವುದಿಲ್ಲ. ದ್ವಿತೀಯ ಪಿಯುಸಿಯ ಒಂದು ಪಠ್ಯವನ್ನೂ ಸಹ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವ ಪಠ್ಯವನ್ನು ಯಥಾವತ್ತಾಗಿ ಉಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಯನ್ನು ಜನಾಭಿಪ್ರಾಯಕ್ಕೆ ಬಿಡುತ್ತೇವೆ. ಯಾವ ಪಠ್ಯದಲ್ಲಿ ತಪ್ಪಾಗಿದೆ? ಎಲ್ಲಿ ಲೋಪ ಉಂಟಾಗಿದೆ? ಅದನ್ನ ಸರಿ ಮಾಡಿಕೊಳ್ಳುತ್ತೇವೆ. ಬಸವಣ್ಣನವರ ಸಾಲು ಸೇರಿಸುತ್ತೇವೆ. ಸಂವಿಧಾನ ಶಿಲ್ಪಿ ಬಿರುದನ್ನೂ ಸೇರ್ಪಡೆ ಮಾಡುತ್ತೇವೆ. ಜನಾಭಿಪ್ರಾಯದಲ್ಲಿ ಏನಾದರೂ ಆಕ್ಷೇಪಗಳು ಬಂದರೆ ಅದನ್ನ ಸ್ವೀಕಾರ ಮಾಡಿ, ಸರಿ ಇದ್ದರೆ ಅದನ್ನ ಪರಿಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

Share This Article
Leave a comment