ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ‘ಹೊಸ ಪೀಠಾಧ್ಯಕ್ಷ’ರ ಆಯ್ಕೆಗೆ ನಿರ್ಧಾರ

Team Newsnap
1 Min Read

ಪೋಕ್ಸೋ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಸ್ವಾಮೀಜಿಯನ್ನು ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ತೆಗೆದು, ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡಲು ಲಿಂಗಾಯತ ಮುಖಂಡರ ಸಭೆಯಲ್ಲಿ ಕೈಗೊಂಡ ನಿರ್ಧಾರ ಕೈಗೊಂಡು ಮತ್ತೊಂದು ಬಿಗ್ ಶಾಕ್ ನೀಡಿದೆ.

ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಮುದಾಯದ ಮುಖಂಡರು ಸೇರಿದಂತೆ ಅನೇಕರು ಭಾಗವಹಿಸಿದ್ದ ಮಹತ್ವದ ವಿಷಯಗಳ ಕುರಿತಂತೆ ಚರ್ಚೆ ನಡೆಸಲಾಗಿದೆ. ಮುರುಘಾ ಸ್ವಾಮೀಜಿಗಳು ಜೈಲುಪಾಲು ಆಗಿರುವ ಹಿನ್ನಲೆಯಲ್ಲಿ, ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಿತು ಎನ್ನಲಾಗಿದೆ. ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಪರಿಷ್ಕರಣೆಗೆ ಸಮಿತಿ ರಚನೆಗೆ ನಿರ್ಧಾರ : ಡಿಸೆಂಬರ್ ಅಂತ್ಯಕ್ಕೆ ವರದಿ

ಅಂತಿಮವಾಗಿ ಮುರುಘಾ ಮಠಕ್ಕೆ, ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಮುರುಘಾ ಶ್ರೀಗಳನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ಕೈಬಿಟ್ಟು, ಹೊಸ ಪೀಠಾಧ್ಯಕ್ಷರ ಆಯ್ಕೆಯ ಬಗ್ಗೆ ಶೀಘ್ರವೇ ನಿರ್ಧಾರ ಹೊರ ಬೀಳಲಿದೆ.

Share This Article
Leave a comment