ವೃತ್ತಿಪರ ಕೋರ್ಸ್ (ಸಿಇಟಿಗೆ)ಗಳಿಗೆ ಆಗಸ್ಟ್ 28, 29ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಸಿಇಟಿ ಪರೀಕ್ಷೆ ಕುರಿತಂತೆ ನಡೆಸಲಾದ ಸಭೆಯ ನಂತರ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ. ಮೊದಲ ದಿನ ಗಣಿತ ಹಾಗೂ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ. ಎರಡನೇ ದಿನ ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮೂರನೇ ದಿನ ಗಡಿನಾಡಿನ ಕನ್ನಡಿಗರಿಗೆ ಪ್ರತ್ಯೇಕವಾಗಿ ಕನ್ನಡ ಪರೀಕ್ಷೆ ನಡೆಯಲಿದೆ. ಜೂನ್.15ರಿಂದ ಸಿಇಟಿ ಪರೀಕ್ಷೆ ಪರೀಕ್ಷೆಗೆ ನೊಂದಣಿ ಆರಂಭವಾಗಲಿದೆ ಎಂದರು.
ಸಿಇಟಿ ಆಧಾರದ ಮೇಲೆ ರ್ಯಾಂಕ್ ನೀಡುವ ಕಾರ್ಯ ನಡೆಯಬೇಕು ಎಂದು ಸಲಹೆ ಮಾಡಿದ್ದರು. ಈ ವಿಚಾರವಾಗಿ ವಿಸೃತವಾಗಿ ಚರ್ಚೆ ಮಾಡಿ, ಸಂಬಂಧ ಪಟ್ಟ ಎಲ್ಲಾ ಕೌನ್ಸಿಲ್ ಗಳಿಗೆ ಪತ್ರವನ್ನು ಬರೆದು, ಈ ಬಗ್ಗೆ ರಿಲ್ಯಾಕ್ಸೇಷನ್ ಕೊಡುವಂತೆ ಕೋರಲಾಗುತ್ತದೆ ಎಂದರು
ಸಿಇಟಿನಲ್ಲಿ ನೀಟ್ ರೀತಿಯಲ್ಲಿ ಕನಿಷ್ಠ ಅಂಕಗಳನ್ನು ಪರಿಗಣಿಸುವ ಬಗ್ಗೆಯೂ ಚರ್ಚೆ ನಡೆಸಲಾಯಿತು. ಅಂಕಿ ಅಂಶಗಳನ್ನು ನೋಡಿ, ಯಾವುದು ಸೂಕ್ತ ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ