January 14, 2026

Newsnap Kannada

The World at your finger tips!

darshan

ದರ್ಶನ್‌ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ

Spread the love

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ಮಂಜೂರಿಸಿದ ಮಧ್ಯಂತರ ಜಾಮೀನು ಆದೇಶವನ್ನು ಪ್ರಶ್ನಿಸಲು ಗೃಹ ಸಚಿವಾಲಯ ಸಮ್ಮತಿ ನೀಡಿದೆ.

“ಹೈಕೋರ್ಟ್‌ ನೀಡಿದ ಜಾಮೀನು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು,” ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ತಿಳಿಸಿದ್ದಾರೆ.

ಸೋಮವಾರದ ನಂತರ ಮೇಲ್ಮನವಿ ಅರ್ಜಿ ಸಲ್ಲಿಕೆ ಸಾಧ್ಯತೆಗಳಿದ್ದು, ಗೃಹ ಸಚಿವಾಲಯದ ಪರವಾಗಿ ಪ್ರಕರಣವನ್ನು ವಾದಿಸಲು ಹಿರಿಯ ವಕೀಲ ವಿಎನ್‌ ರಘುಪತಿಯನ್ನು ನೇಮಿಸಲಾಗಿದೆ.ಇದನ್ನು ಓದಿ –ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್

ದರ್ಶನ್‌ ಅಸ್ವಸ್ಥರಾಗಿರುವ ಕಾರಣಕ್ಕಾಗಿ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್‌ಗೆ ಇನ್ನೂ ಶಸ್ತ್ರಚಿಕಿತ್ಸೆ ಮಾಡಬೇಕಿದೆ ಎಂಬ ಕಾರಣವನ್ನು ಮೇಲ್ಮನವಿ ಅರ್ಜಿಯಲ್ಲಿ ಪ್ರಸ್ತಾಪಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

error: Content is protected !!