ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ, ಮೇ 15 ರೊಳಗ 27 ಸಾವಿರ ಅತಿಥಿ ಶಿಕ್ಷಕರ ಭರ್ತಿ ಮಾಡಲು ನಿರ್ಧಾರ ಮಾಡಿದೆ
ಕೋವಿಡ್ ಹಿನ್ನೆಲೆ ಕಳೆದ ಎರಡು ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಆದ ಕಲಿಕಾ ಹಿನ್ನಡೆ ಸರಿದೂಗಿಸಲು 2022-23ನೇ ಶೈಕ್ಷಣಿಕ ಅವಧಿಯನ್ನು ಮೇ 16 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.
ಈ ವರ್ಷ ಶಾಲೆ ಆರಂಭವಾಗುವ ಹೊತ್ತಿಗೆ 27,000 ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ನಿರ್ಧಾರ ಮಾಡಿದೆ. ಶೀಘ್ರ ಭರ್ತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದರು.
ಆರ್ಥಿಕ ಇಲಾಖೆಯ ಒಪ್ಪಿಗೆ
27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮತಿಯೂ ಈಗಾಗಲೇ ದೊರೆತಿದೆ. ಇದರ ಜತೆಗೆ ಹೆಚ್ಚುವರಿ 3 ಸಾವಿರ ಶಿಕ್ಷಕರ ಭರ್ತಿಗೂ ಪ್ರಸ್ತಾವನೆ ಕಳುಹಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತರೆ ಒಟ್ಟು 30 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಸಂಬಳ ಎಷ್ಟು ?
ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ ರೂ.7,500.
ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ ರೂ.8000.
ಈ ನಡುವೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಭರ್ತಿಗೆ ಏಪ್ರಿಲ್ 26 ರವರೆಗೆ ಅರ್ಜಿ ತುಂಬಲು ಅವಕಾಶ ನೀಡಲಾಗಿತ್ತು.
ಮೇ 21, 22 ರಂದು ಸದರಿ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕ ಆದೇಶ ನೀಡಲು, ಕರ್ತವ್ಯಕ್ಕೆ ಹಾಜರಾಗಲು ಒಂದು ವರ್ಷ ಬೇಕಾಗುತ್ತದೆ. ಅಲ್ಲಿಯವರೆಗೆ ಕೊರತೆ ನೀಗಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ, ಸದ್ಯ ಸರ್ಕಾರ 4000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ.
ಸರ್ಕಾರಿ ಶಾಲೆಗಳಲ್ಲಿ ನೇಮಕವಾಗುವ ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಿಸಲು ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು