ರಾಜ್ಯ ಸರ್ಕಾರದ ಮರಾಠ ಪ್ರಾಧಿಕಾರ ರಚನೆ ವಿರುದ್ಧ ಹೋರಾಟ ತೀವ್ರ ಗೊಳಿಸಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ.
ಈ ಸಂಬಂಧ ( ಡಿ 8) ಬುಧವಾರ ರಾಜ್ಯದ ರಾಜಧಾನಿಯಲ್ಲಿ ಸಭೆ ಕರೆದಿರುವುದಾಗಿ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ , ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಅಂದು ಕನ್ನಡ ಸಂಘಟನೆಗಳ ಮುಖಂಡರು ಸಭೆ ನಡೆಸಿ ಹೋರಾಟ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಿಫಲ ಮಾಡಲು ಎಲ್ಲ ರೀತಿಯ ಯೋಜನೆ ನಡೆಯಿತು. ದೂರಿದರಲ್ಲದೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಭಾಷಿಕರ ಏಜೆಂಟ್ ಎಂದು ಜರಿದರು.
ಪ್ರಾಧಿಕಾರದ ರಚನೆಯನ್ನು ಕೈಬಿಡದ ಕಾರಣ ಮುಂದೆ ಉಗ್ರ ರೂಪದ ಹೋರಾಟದ ಜತೆಗೆ ಜೈಲ್‌ಭರೋ ಚಳವಳಯನ್ನು ನಡೆಸಲಾಗುತ್ತೆ ಎಂದು ಎಚ್ಚರಿಸಿದರು.
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ