February 22, 2026

Newsnap Kannada

The World at your finger tips!

Suresh Kumar

ರಾಜ್ಯದಲ್ಲೂ‌‌ 10 – 12 ನೇ ತರಗತಿ‌ ಪರೀಕ್ಷೆ ಬಗ್ಗೆ ಶೀಘ್ರ ನಿರ್ಧಾರ – ಸಚಿವ ಸುರೇಶ್ ಕುಮಾರ್

Spread the love

ಸಿಬಿಎಸ್ಇ 12 ನೇ ತರಗತಿಯ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವ ಹಿನ್ನೆಲೆ ರಾಜ್ಯದಲ್ಲೂ ಕೂಡ 10 ಮತ್ತು 12ನೇ ಪರೀಕ್ಷೆಗಳನ್ನೂ ನಡೆಸುವ/ನಡೆಸದಿರುವ ಕುರಿತು ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಪ್ರಕಟನೆ ನೀಡಿರುವ ಸಚಿವರು‌ ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

error: Content is protected !!