May 22, 2022

Newsnap Kannada

The World at your finger tips!

voters

Image source: google.com

ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ : ಜೂನ್ 10 ರಂದು ಮತದಾನ – ಅಂದೇ ಫಲಿತಾಂಶ

Spread the love

ರಾಜ್ಯದ 4 ರಾಜ್ಯಸಭಾ ಸ್ಥಾನಗಳೂಸೇರಿ ದೇಶದಲ್ಲಿ ಒಟ್ಟು 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಜೂನ್‌ 10 ರಂದು ಚುನಾವಣೆ ನಡೆಯಲಿದೆ ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ಅವರಿಂದ ತೆರವಾಗಲಿರುವ ಮೂರು ಸ್ಥಾನ ಮತ್ತು ಆಸ್ಕರ್ ಫರ್ನಾಂಡೀಸ್ ಅವರ ನಿಧನದಿಂದ ತೆರವಾಗಲಿರುವ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ಇದನ್ನು ಓದಿ : ರಾಜೀವ್‌ ಕುಮಾರ್‌ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ಒಟ್ಟು 15 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಒಟ್ಟು 57 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

error: Content is protected !!