ಉಚಿತ ವಿದ್ಯುತ್ ಪಡೆಯಲು ಮನೆಗಳ ಕರಾರುಪತ್ರ ಕಡ್ಡಾಯ : ಇಂಧನ ಸಚಿವ ಕೆ.ಜೆ.ಜಾರ್ಜ್

Team Newsnap
1 Min Read

ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಸಚಿವ ಕೆ.ಜೆ.ಜಾರ್ಜ್‌ ಸುದ್ದಿಗೋಷ್ಠಿ ನಡೆಸಿದ್ದು ಉಚಿತ ವಿದ್ಯುತ್ ಯೋಜನೆ ಕುರಿತು ಮಾಹಿತಿ ನೀಡಿದ್ದಾರೆ.

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಸ್ವಂತ ಮನೆಯಿರಲಿ, ಬಾಡಿಗೆ ಮನೆ ಇರಲಿ ಉಚಿತ ವಿದ್ಯುತ್ ಪಡೆಯಲು ಕರಾರು ಪತ್ರ ಬೇಕು. ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ 2.16 ಕೋಟಿ 200 ಯೂನಿಟ್ ಗಿಂತ ಕಡಿಮೆ ಬಳಕೆದಾರರಿದ್ದಾರೆ. 2.14 ಕೋಟಿ ಜನರಿಗೆ ಇದರ ಲಾಭ ಸಿಗಲಿದೆ. 200 ಯೂನಿಟ್ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. 12 ತಿಂಗಳ ಸರಾಸರಿ ಆಧಾರದ ಮೇಲೆ 10% ಹೆಚ್ಚು ವಿದ್ಯುತ್ ಬಳಕೆ ಉಚಿತವಾಗಿರುತ್ತದೆ ಎಂದರು.ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ? ಸಂಸದ ಬಸವರಾಜ್

ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಗ್ರಾಹಕರು ಅರ್ಜಿ ಹಾಕಬೇಕು. ಸೇವಾಸಿಂಧು ಆಯಪ್ ನಲ್ಲಿ ಜನರು ಅರ್ಜಿ ಸಲ್ಲಿಸಬೇಕು. ಜುಲೈ ತಿಂಗಳ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ ಎಂದು ಹೇಳಿದ್ದಾರೆ.

Share This Article
Leave a comment