ಡಿಗ್ರಿ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜ್ ಪುನರಾರಂಭಕ್ಕೆ ನ.17 ರಂದು ಮುಹೂರ್ತ ಫಿಕ್ಸ್

Team Newsnap
2 Min Read

ಕರ್ನಾಟಕದ ಎಲ್ಲಾ ಡಿಗ್ರಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ನವೆಂಬರ್ 17ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಲಾಕ್​ಡೌನ್​ನಿಂದ ಮಾರ್ಚ್​ ತಿಂಗಳ ಅಂತ್ಯದಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಬಳಿಕ ಆನ್​ಲೈನ್​ನಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗಿತ್ತು. ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕಾಲೇಜುಗಳ ಪುನರಾರಂಭದ ದಿನಾಂಕವನ್ನು ಘೋಷಿಸಿದೆ.

ದೀಪಾವಳಿ ಮುಗಿದ ಬಳಿಕ ನವೆಂಬರ್ 17ರಿಂದ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭವಾಗಲಿವೆ.

ರಾಜ್ಯದಲ್ಲಿ ಕಾಲೇಜು ಆರಂಭಿಸುವ ವಿಚಾರವಾಗಿ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹಾಗೂ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ಆರಂಭಕ್ಕೆ ಮಾಡಿಕೊಂಡ ಸಿದ್ದತೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಕೊವೀಡ್ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆ ಮಾಡಿಕೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.ಕಳೆದ ಏಳೆಂಟು ತಿಂಗಳಿಂದ ಕ್ಲೋಸ್ ಆಗಿದ್ದ ಕಾಲೇಜುಗಳನ್ನು ನವೆಂಬರ್ 17ರಿಂದ ಮರು ಆರಂಭಿಸಲು ಸಿಎಂ ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.

ಕಾಲೇಜುಗಳ ಆರಂಭಕ್ಕೆ ಯಾವ ರೀತಿ ಸಿದ್ದತೆ ಹಾಗೂ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ಪಡೆದರು. ಪ್ರಾತ್ಯಕ್ಷಿಕೆ ಮೂಲಕ ಸಚಿವರು ಹಾಗೂ ಅಧಿಕಾರಿಗಳು‌‌ ಸಿಎಂಗೆ ಸಿದ್ಧತೆಗಳನ್ನು ವಿವರಿಸಿದರು. ಈ ಹಿನ್ನೆಲೆಯಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜುಗಳು ನವೆಂಬರ್ 17ರಿಂದ ಪುನರಾರಂಭವಾಗಲಿವೆ.

Share This Article
Leave a comment