ದೆಹಲಿ ಗಲಭೆ- ರೈತರ ಕೈವಾಡ ಇಲ್ಲ: ಹೋರಾಟ ತಡೆಯಲು ಸಾಧ್ಯವಿಲ್ಲ- ರಾಮನಗರದಲ್ಲಿ ರೈತರ ಎಚ್ಚರಿಕೆ

Team Newsnap
1 Min Read

ದೆಹಲಿಯಲ್ಲಿ ರೈತರ ಪ್ರತಿಭಟನೆಯ ಹೆಸರಿನಲ್ಲಿ ದುಷ್ಕರ್ಮಿಗಳು ಹಿಂಸಾಚಾರ ನಡೆಸಿದ್ದಾರೆ. ಇದನ್ನೇ ನೆವವಾಗಿಟ್ಟು ಕೊಂಡು ರೈತರ ಹೋರಾಟ ಹತ್ತಿಕ್ಕಲು ಪ್ರಯತ್ನವಾಗುತ್ತಿದೆ. ಇದು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ರೈತ ಸಂಘದ ಮುಖಂಡರು ಎಚ್ಚರಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘದ ಮುಖಂಡ ಮಲ್ಲೇಗೌಡರು
ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಜೊತೆಗೆ ಚರ್ಚೆ ನಡೆಸಿ ಎಲ್ಲಾ ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ನಂತರ ರೈತರಿಗೆ ಸಾಲ ಕೊಡುವಾಗ ಅದಕ್ಕಾಗಿಯೇ ಪ್ರತ್ಯೇಕ ನೀತಿ ತರಬೇಕು ಎಂದು ಒತ್ತಾಯಿಸಿ ದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶಾದ್ಯಂತ ಬೀದಿಗಿಳಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಕೇಂದ್ರ ಸರ್ಕಾರ ನಮ್ಮ ಹೋರಾಟ ತಡೆಯಲು ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದೆ. ಆದರೆ ರೈತರ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿಯೂ ಸಹ ಕೃಷಿ ಕಾಯ್ದೆಯನ್ನು ವಿರೋಧಿಸಿ ಹೋರಾಟ ಮಾಡಿದ್ದೇವೆ. ರಾಜ್ಯದಲ್ಲಿಯೂ ಸಹ ಸರ್ಕಾರ ತಮ್ಮ ಹೋರಾಟವನ್ನು ತಡೆಯಲು ಪ್ರಯತ್ನ ಮಾಡಿದೆ. ಹಾಗಾಗಿ ಇದು ರೈತರಿಗೆ ಮಾಡ್ತಿರುವ ಅಪಮಾನ ಎಂದು ಅವರು ಕಿಡಿಕಾರಿದರು.

ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಗೂ ರೈತರಿಗೂ ಯಾವುದೇ ಸಂಬಂಧವಿಲ್ಲ. ಆದರೆ ಕೆಲವರು ರೈತರನ್ನು ಮುಂದಿಟ್ಟುಕೊಂಡು ರೈತರ ಹೆಸರಿನಲ್ಲಿ ಗಲಭೆ ಮಾಡಿ ರೈತರ ಹೋರಾಟಕ್ಕೆ ಮಸಿಬಳಿಯುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ಕೂಡಲೇ ರೈತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿಯಬೇಕಿದೆ. ರೈತರ ಎಲ್ಲಾ ಬೇಡಿಕೆಗಳಿಗೆ ಮನ್ನಣೆ ಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತೆ ಎಂದು ಎಚ್ಚರಿಕೆ ನೀಡಿದರು.

Share This Article
Leave a comment