ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.
ಮಂಡ್ಯ, ಮಳವಳ್ಳಿ, ಕೆ.ಆರ್ ಪೇಟೆ, ಶ್ರೀರಂಗಪಟ್ಟಣ್ಣ. ನಾಗಮಂಗಲ, ಮದ್ದೂರು.ಪಾಂಡವಪುರದ 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ದೂರಿನ ಪತ್ರದಲ್ಲಿ ಸಚಿವರು 6 ರಿಂದ 8 ಲಕ್ಷವವನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಒಂದು ವೇಳೆ ತಮಗೆ ನ್ಯಾಯಾಸಿಗದೇ ಹೋದರೆ ನಾವುಗಳು ಪಾಯ್ಸನ್ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳವಂತೆ ರಾಜ್ಯಪಾಲರು ವಂದಿತ ಶರ್ಮ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ತಮ್ಮ ದೂರಿನ ವಿರುದ್ಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂಬ ಮಾಹಿತಿ ನೀಡಿದ್ದಾರೆ. ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡ್ತಿದ್ದಾರೆ . ಜೆಡಿ ಅವರು ನಾನು ಯಾರ ಬಳಿ ಹಣ ಕೇಳಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿಸುತ್ತೇವೆ.
ಮೊದಲು ಇದು ಸತ್ಯನಾ, ಅಸತ್ಯಾನ ಎಂದು ತಿಳಿದು ತನಿಖೆ ಮಾಡಿಸುತ್ತೇವೆ, ತಿಂಡಿ, ಊಟ ಮಾಡದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದರ ಬಗ್ಗೆ ಬೇಜಾರು ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ