Karnataka

ಸಚಿವ ಚಲುವರಾಯಸ್ವಾಮಿಯಿಂದ ಲಂಚಕ್ಕೆ ಬೇಡಿಕೆ : ರಾಜ್ಯಪಾಲರಿಗೆ ಸಹಾಯಕ ಕೃಷಿ ನಿರ್ದೇಶಕರಿಂದ ದೂರು

ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.

ಮಂಡ್ಯ, ಮಳವಳ್ಳಿ, ಕೆ.ಆರ್‌ ಪೇಟೆ, ಶ್ರೀರಂಗಪಟ್ಟಣ್ಣ. ನಾಗಮಂಗಲ, ಮದ್ದೂರು.ಪಾಂಡವಪುರದ 7 ಸಹಾಯಕ ಕೃಷಿ ನಿರ್ದೇಶಕರಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ದೂರಿನ ಪತ್ರದಲ್ಲಿ ಸಚಿವರು 6 ರಿಂದ 8 ಲಕ್ಷವವನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಒಂದು ವೇಳೆ ತಮಗೆ ನ್ಯಾಯಾಸಿಗದೇ ಹೋದರೆ ನಾವುಗಳು ಪಾಯ್ಸನ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳವಂತೆ ರಾಜ್ಯಪಾಲರು ವಂದಿತ ಶರ್ಮ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ತಮ್ಮ ದೂರಿನ ವಿರುದ್ಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್​ ಲೆಟರ್​​ ಎಂಬ ಮಾಹಿತಿ ನೀಡಿದ್ದಾರೆ. ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡ್ತಿದ್ದಾರೆ . ಜೆಡಿ ಅವರು ನಾನು ಯಾರ ಬಳಿ ಹಣ ಕೇಳಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿಸುತ್ತೇವೆ.

ಮೊದಲು ಇದು ಸತ್ಯನಾ, ಅಸತ್ಯಾನ ಎಂದು ತಿಳಿದು ತನಿಖೆ ಮಾಡಿಸುತ್ತೇವೆ, ತಿಂಡಿ, ಊಟ ಮಾಡದೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದರ ಬಗ್ಗೆ ಬೇಜಾರು ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Team Newsnap
Leave a Comment
Share
Published by
Team Newsnap

Recent Posts

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024