December 18, 2024

Newsnap Kannada

The World at your finger tips!

siddarama cm

ಮುಡಾ ಹಗರಣ: 50:50 ಅನುಪಾತದಲ್ಲಿ ಹಂಚಿದ ಸೈಟ್‌ಗಳ ವಾಪಸ್ಸಿಗೆ ಕಾಂಗ್ರೆಸ್ ನಾಯಕರು ಒತ್ತಾಯ

Spread the love

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸೈಟ್‌ಗಳನ್ನು ವಾಪಸ್ ಕೊಟ್ಟಿದ್ದರಿಂದ ಮಾತ್ರ ಪ್ರಕರಣ ಕೊನೆಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಮುಡಾದಿಂದ 50:50 ಅನುಪಾತದಲ್ಲಿ ಹಂಚಿಕೆಗೊಂಡ ಎಲ್ಲಾ ಸೈಟ್‌ಗಳನ್ನು ವಾಪಸ್ ಪಡೆಯಬೇಕು ಎಂದು ಪಟ್ಟುಹಿಡಿದಿದ್ದಾರೆ.

ಇದರ ಜೊತೆಗೆ, ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕೂಡ ಬೇನಾಮಿ ಹೆಸರಿನಲ್ಲಿ ಸೈಟ್‌ಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನು ಓದಿ –ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ

ಈ ಹಗರಣದ ವಿಚಾರ ಮುಂದಿಟ್ಟುಕೊಂಡು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಪ್ರಕರಣ ಈಗ ಕೋರ್ಟ್ ಮೆಟ್ಟಿಲೇರಿದೆ.

Copyright © All rights reserved Newsnap | Newsever by AF themes.
error: Content is protected !!