ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣತೆಗೆ ಬೇಕಾದ ಕನಿಷ್ಠ ಅಂಕವನ್ನು 35ರಿಂದ 33ಕ್ಕೆ ಕಡಿತಗೊಳಿಸಲು ಖಾಸಗಿ ಶಾಲೆಗಳ ಒಕ್ಕೂಟ ಸರ್ಕಾರದ ಗಮನಸೆಳೆದಿದೆ.
ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ಪತ್ರ ಬರೆದಿದ್ದು, ಈಗಿನಿಂದಲೇ ಈ ಮಾರ್ಪಾಡನ್ನು ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ.
ಖಾಸಗಿ ಶಾಲೆಗಳ ಬೇಡಿಕೆಯ ಹಿಂದೆ ಕಾರಣವೇನು?
ಪ್ರಸ್ತುತ ಸಿಬಿಎಸ್‌ಸಿ (CBSE) ಹಾಗೂ ಐಸಿಎಸ್‌ಸಿ (ICSE) ಪಠ್ಯಕ್ರಮಗಳಲ್ಲಿ ಉತ್ತೀರ್ಣಕ್ಕೆ 33 ಅಂಕವನ್ನೇ ಪಾಸ್ ಅಂಕದ ಮಾನದಂಡವಾಗಿ ಪರಿಗಣಿಸಲಾಗುತ್ತಿದೆ. ಇದನ್ನೇ ರಾಜ್ಯ ಪಠ್ಯಕ್ರಮದ ಶಾಲೆಗಳಿಗೂ ಅನ್ವಯಿಸಬೇಕು ಎಂದು ಖಾಸಗಿ ಶಾಲೆಗಳು ಒತ್ತಾಯಿಸುತ್ತಿವೆ.
ಈ ಕುರಿತು ಈಗಾಗಲೇ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ ಖಾಸಗಿ ಶಾಲೆಗಳು, ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿವೆ. ಈ ಬಗ್ಗೆ ವಿಧಾನಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಸಹ ಶಿಕ್ಷಣ ಇಲಾಖೆಗೆ ಪತ್ರ ಬರೆದು ನಿರ್ಧಾರ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.
35 ಅಂಕದಿಂದ 33ಕ್ಕೆ ಇಳಿಸುವ ಅಗತ್ಯವೇನು?
ಸಿಬಿಎಸ್‌ಸಿ ಹಾಗೂ ಐಸಿಎಸ್‌ಸಿ ಬೋರ್ಡ್‌ಗಳಲ್ಲಿ ವಿದ್ಯಾರ್ಥಿಗಳು 100 ಅಂಕಗಳ ಪರೀಕ್ಷೆಯಲ್ಲಿ 33 ಅಂಕ ಪಡೆದರೂ ಪಾಸ್ ಆಗುತ್ತಾರೆ.
ಈ ಬೋರ್ಡ್‌ಗಳಲ್ಲಿ 20 ಅಂಕಗಳ ಇಂಟರ್ನಲ್ ಅಸೆಸ್ಮೆಂಟ್ ಅನ್ನು ಸಂಪೂರ್ಣವಾಗಿ ಪರಿಗಣಿಸಲಾಗುತ್ತದೆ.
ಆದರೆ ರಾಜ್ಯ ಪಠ್ಯಕ್ರಮದಲ್ಲಿ 35 ಅಂಕ ಪಾಸ್ ಅಂಕವಾಗಿದ್ದು, ಇಂಟರ್ನಲ್ ಅಸೆಸ್ಮೆಂಟ್ ಅನ್ನು ಸಂಪೂರ್ಣವಾಗಿ ಪರಿಗಣಿಸಲಾಗುವುದಿಲ್ಲ.
ಇದರಿಂದಾಗಿ ರಾಜ್ಯ ಪಠ್ಯಕ್ರಮದ ಫಲಿತಾಂಶ ಕಡಿಮೆಯಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಹೆಚ್ಚಾಗಿ ಕೇಂದ್ರ ಬೋರ್ಡ್ ಶಾಲೆಗಳಿಗೆ ಸೇರಿಸುತ್ತಿದ್ದಾರೆ.
ಈ ತಾರತಮ್ಯದಿಂದ ರಾಜ್ಯ ಪಠ್ಯಕ್ರಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು