December 9, 2024

Newsnap Kannada

The World at your finger tips!

WhatsApp Image 2023 06 07 at 9.53.53 PM

ಡಿನೋಟಿಫಿಕೇಶನ್‌ ಪ್ರಕರಣ ರದ್ದು : ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Spread the love

ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಡಿನೋಟಿಫಿಕೇಷನ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದ್ದ ಡಿನೋಟಿಫಿಕೇಷನ್‌ ಪ್ರಕರಣವನ್ನು ಕರ್ನಾಟಕ ರಾಜ್ಯದ ಹೈಕೋರ್ಟ್‌ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಕಳೆದ ಎಂಟು ವರ್ಷದ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿಯೇ ಡಿನೋಟಿಫಿಕೇಷನ್ ಹಗರಣ ಮಾಡಲಾಗಿದೆ ಎಂದು ಕಳೆದ 8 ವರ್ಷಗಳ ಹಿಂದೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಾಕಷ್ಟು ವಿಚಾರಣೆಗಳನ್ನು ಎದುರಿಸಿದ್ದರು. ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ದಾಖಲಿಸಿದ್ದ ದೂರು ದಾಖಲಿಸಿದ್ದರು.

ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದ ಜಯಕುಮಾರ್ ಹಿರೇಮಠ್ ಅವರು, ಬಿಎಸ್‌ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿಯ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರು ನೀಡಿದ್ದರು.

ಈ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆಯು 2015 ರಲ್ಲಿ ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈಗ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ನಲ್ಲಿ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಿಂದ ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಕಳೆದ 8 ವರ್ಷದ ಹಿಂದಿನ ಪ್ರಕರಣದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

Copyright © All rights reserved Newsnap | Newsever by AF themes.
error: Content is protected !!