ರೋಹಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆ: ಸರ್ಕಾರದ ಆದೇಶ

Team Newsnap
1 Min Read

ಮೈಸೂರು : ಡಿಸಿ ನಿವಾಸದ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ.

ಈಗ ರಾಜ್ಯ ಸರ್ಕಾರದಿಂದ ರೋಹಿಣಿ ವಿರುದ್ಧದ ಆರೋಪ ಕುರಿತು ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಆದೇಶ ಹೊರಡಿಸಿದ್ದಾರೆ.

ಅಧಿಕಾರಿ ರೋಹಿಣಿ ಸಿಂಧೂರಿ ಪ್ರಾಥಮಿಕ ತನಿಖೆಯಲ್ಲಿ ಅಸಮರ್ಪಕ ಉತ್ತರ ನೀಡಿದ್ದಾರೆ.ಅಲ್ಲದೇ ಆರೋಪದ ಸಂಬಂಧ ಯಾವುದೇ ಸೂಕ್ತ ದಾಖಲೆ ನೀಡಿಲ್ಲ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಸಿಂಧೂರಿ ಅವರ ವಿರುದ್ಧದ ಆರೋಪಗಳ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ಆದೇಶಿಸಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಬಟ್ಟೆ ಬ್ಯಾಗ್ ಖರೀದಿ ಸಂಬಂಧಿಸಿದಂತೆ 15 ರೂ ಬ್ಯಾಗ್ ಗಳನ್ನು 50 ರೂ ಬಿಲ್ ಹಾಕಿ ಖರೀದಿಸಿದ್ದಾರೆ ಎಂಬುದಾಗಿ ಆರೋಪಿಸಲಾಗಿತ್ತು. ಇದಲ್ಲದೇ ಅವರು ವಾಸವಿದ್ದ ನಿವಾಸವು ಪಾರಂಪರಿಕ ಕಟ್ಟಡವಾಗಿದ್ದರೂ, ಅದಕ್ಕೆ ಧಕ್ಕೆ ಉಂಟು ಮಾಡಿ ಈಜುಕೊಳ ನಿರ್ಮಾಣದ ಆರೋಪ ಕೂಡ ಕೇಳಿ ಬಂದಿತ್ತು.

ಕೋವಿಡ್ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಸರಬರಾಜು ಮಾಡದೇ, ರೋಗಿಗಳ ಸಾವಿಗೆ ಕಾರಣವಾಗಿದ್ದಾರೆ ಎಂಬ ನಿರ್ಲಕ್ಷ್ಯ ಆರೋಪ ಕೂಡ ಕೇಳಿ ಬಂದಿತ್ತು.ಶಾಲಾ ಮಕ್ಕಳಿಗೆ ಹೆಬ್ಬುಲಿ ಕಟಿಂಗ್ ಮಾಡಬೇಡಿ : ಶಿಕ್ಷಕರಿಂದ ಪತ್ರ

ಈ ಎಲ್ಲಾ ಆರೋಪಗಳ ಹಿನ್ನಲೆಯಲ್ಲಿ ಇದೀಗ ಇಲಾಖಾವಾರು ತನಿಖೆಗೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ.

Share This Article
Leave a comment