ಆರ್ಕಿಟೆಕ್ಟ್ ಓದುತ್ತಿದ್ದ ಯುವಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೇರಿಕಾದಲ್ಲಿ ಅವಕಾಶ ದೊರೆಯಲಿಲ್ಲ ಎಂಬ ಕಾರಣಕ್ಕಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ.
ಸಾಯಿಸನ್ವಿತ್ (23) ಮೃತ ದುರ್ದೈವಿ. ಮೃತ ಯುವಕನು ಮಾಗಡಿ ಪಟ್ಟಣದ ನಿವಾಸಿ. ವಿದ್ಯಾಭ್ಯಾಸಕ್ಕೆ ಯು.ಎಸ್ನಲ್ಲಿ ಅವಕಾಶ ಸಿಗಲಿಲ್ಲ ಎಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯು.ಎಸ್ನಲ್ಲಿ ಕನ್ಸ್ಟ್ರಕ್ಷನ್ ಮ್ಯಾನೇಜ್ಮೆಂಟ್ನ ವಿದ್ಯಾಭ್ಯಾಸಕ್ಕಾಗಿ ಹೋಗಬೇಕಾಗಿತ್ತು.
ಪಾಸ್ ಪೋರ್ಟ್ನಲ್ಲಿ ಹೆಸರು ಸರಿಯಾಗಿ ನಮೂದಿಸಿಲ್ಲ ಎಂಬ ಕಾರಣಕ್ಕೆ ಮೇಲ್ ಬಂದಿಲ್ಲ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನು ಓದಿ : ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಾಗಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ರವಾನಿಸಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
More Stories
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ