ಅಮೆರಿಕಾದಲ್ಲಿ ಓದಲು ಅವಕಾಶ ವಂಚಿತ ಯುವಕ ಮಾಗಡಿಯಲ್ಲಿ ಆತ್ಮಹತ್ಯೆ

Team Newsnap
1 Min Read

ಆರ್ಕಿಟೆಕ್ಟ್ ಓದುತ್ತಿದ್ದ ಯುವಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೇರಿಕಾದಲ್ಲಿ ಅವಕಾಶ ದೊರೆಯಲಿಲ್ಲ ಎಂಬ ಕಾರಣಕ್ಕಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ.

ಸಾಯಿಸನ್ವಿತ್ (23) ಮೃತ ದುರ್ದೈವಿ. ಮೃತ ಯುವಕನು ಮಾಗಡಿ ಪಟ್ಟಣದ ನಿವಾಸಿ. ವಿದ್ಯಾಭ್ಯಾಸಕ್ಕೆ ಯು.ಎಸ್​ನಲ್ಲಿ ಅವಕಾಶ ಸಿಗಲಿಲ್ಲ ಎಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯು.ಎಸ್​ನಲ್ಲಿ ಕನ್​ಸ್ಟ್ರಕ್ಷನ್ ಮ್ಯಾನೇಜ್ಮೆಂಟ್​ನ ವಿದ್ಯಾಭ್ಯಾಸಕ್ಕಾಗಿ ಹೋಗಬೇಕಾಗಿತ್ತು.
ಪಾಸ್ ಪೋರ್ಟ್​ನಲ್ಲಿ ಹೆಸರು ಸರಿಯಾಗಿ ನಮೂದಿಸಿಲ್ಲ ಎಂಬ ಕಾರಣಕ್ಕೆ ಮೇಲ್ ಬಂದಿಲ್ಲ. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನು ಓದಿ : ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಾಗಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ರವಾನಿಸಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment