ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್‌ಸ್ಟೇಬಲ್ ಅಮಾನತು

Team Newsnap
1 Min Read
Derogatory comment against MP Pratap Simha – Head Constable suspended ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್

ಮೈಸೂರು: ಸಂಸದ ಪ್ರತಾಪ್ ಸಿಂಹ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತು ಮಾಡಲಾಗಿದೆ.

ವಿ.ವಿ. ಪುರಂ ಟ್ರಾಫಿಕ್ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಬಿ. ಪ್ರಕಾಶ್ ಅಮಾನತುಗೊಂಡಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಪ್ರಕಾಶ್ ಎಂಬವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಸಾರ್ವಜನಿಕ ವಲಯದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದಿಸುವ ಮೂಲಕ ಅವಹೇಳನಕಾರಿಯಾಗಿ ಪೋಸ್ಟ್ಗಳನ್ನು ಮಾಡುತ್ತಿರುವ ಇವನನ್ನು ಕಾನೂನು ಪ್ರಕಾರ ವಿಚಾರಣೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿದ್ದರು.ರಾಣೆಬೆನ್ನೂರು ಕಾರ್ಮಿಕ ಇಲಾಖೆಯ ಇನ್ಸ್ ಪೆಕ್ಟರ್ ಬೇಗಂ 5 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ

ಸಂಸದರ ದೂರನ್ನು ಪರಿಗಣಿಸಿ, ಇಲಾಖೆ ವಿಚಾರಣೆ ಬಾಕಿ ಇರಿಸಿ ಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ.

Share This Article
Leave a comment