ಸ್ಯಾಂಡಲ್‍ವುಡ್ ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನನವಾಗಿದೆ. ದೇವೇಗೌಡ ರಿಗೆ ಮರಿಮೊಮ್ಮಗ ಬಂದಂತಾಗಿದೆ. ಕುಮಾರಸ್ವಾಮಿ ತಾತಾ ಆಗಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ದೊಡ್ಡಗೌಡರ ಕುಟುಂಬಕ್ಕೆ ಒಬ್ಬ ಸದಸ್ಯ ಸೇರ್ಪಡೆಯಾಗಿದ್ದರಿಂದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದಾರೆ.
ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ.
ಇದು ಶುಭ ಘಳಿಗೆ – ಸಂತಸ : ಎಚ್ ಡಿಕೆ
ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ ಎಂದು ಎಚ್ ಡಿ ಕೆ ಟ್ವಿಟ್ ಮಾಡಿದ್ದಾರೆ.
ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ