ಹಾಸನಾಂಬೆ ದರ್ಶನಕ್ಕೆ ಬಂದಿದ್ದ ಭಕ್ತನೊಬ್ಬ ಹೃದಯಾಘಾತದಿಂದ ಸಾವು

Team Newsnap
0 Min Read

ಹಾಸನಾಂಬೆ ದೇವಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದದ ಭಕ್ತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಗಿರೀಶ್‌ ಸರತಿ ಸಾಲಿನಲ್ಲಿ ನಿಂತಿದ್ದರು.ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ PFI ಪ್ಲಾನ್; ಐದು ಮಂದಿ ಬಂಧನ

ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ನೆಲಕ್ಕೆ ಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಹಾಸನ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment