ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮತ್ತು ಜಿಲ್ಲಾಧ್ಯಕ್ಷರ ಚುನಾವಣೆಯನ್ನು ಎರಡು ತಿಂಗಳ ಒಳಗಡೆ ಮಾಡುವಂತೆ ಹೈಕೋರ್ಟ್ ತಾಕೀತು ಮಾಡಿ, ಗಡುವಿನ ಆದೇಶ ಮಾಡಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠವು ಸರ್ಕಾರಕ್ಕೆ ಹಾಗೂ ಚುನಾವಣಾಧಿಕಾರಿಗೆ ಈ ಕುರಿತಂತೆ ಸ್ಪಷ್ಟ ಆದೇಶ ಮಾಡಿದೆ.
ನ್ಯಾಯಾಲಯದ ಆದೇಶದಂತೆ ಅಕ್ಟೋಬರ್ ಕೊನೆಯ ವಾರ ಅಥವಾ ನವಂಬರ್ ಮೊದಲನೇ ವಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.
ಹೈಕೋರ್ಟ್ ನ ತೀರ್ಪಿನ ಆದೇಶದ ಪ್ರತಿ ತಲುಪಿದ ನಂತರ, ಆದೇಶದಲ್ಲಿ ರುವ ಸಂಗತಿ ಅರಿತು, ಈ ಕುರಿತಂತೆ ನಿರ್ಧಾರ ಕೈಗೊಳ್ಳಲು ಕಸಾಪ ಆಡಳಿತಾಧಿಕಾರಿಗಳು ಬಯಸಿದ್ದಾರೆಂದು ಮೂಲಗಳು ಹೇಳಿವೆ.
ಧಾರವಾಡ ಹೈಕೋರ್ಟ್ ನ ತೀರ್ಪಿನ ನಂತರ ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿ, ಬಿರುಸಿನ ಪ್ರಚಾರ ಆರಂಭಿಸಿ ಬಿಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು