February 23, 2026

Newsnap Kannada

The World at your finger tips!

dks kaveri

ತುಂಗಾರತಿ ಮಾದರಿಯಲ್ಲೇ ಕಾವೇರಿ ಆರತಿನಡೆಸಲು ಡಿಕೆಶಿ ಸಿದ್ದತೆ

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇದೀಗ ತುಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ಸಿದ್ದತೆ ಮಾಡುತ್ತಿದ್ದಾರೆ
ರಾಜ್ಯ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಜೊತೆ ಡಿ.ಕೆ.ಶಿವಕುಮಾರ್​​ ಮಾತುಕತೆ ನಡೆಸಿದ್ದಾರೆ.

ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಆಣೆಕಟ್ಟು ಯೋಜನೆ ಮೂಲಕ ಹಳೆ ಮೈಸೂರು ಭಾಗದ ಮತದಾರರ ಓಲೈಕೆಗಾಗಿ ತಮ್ಮ ಹುಟ್ಟೂರು ಸಮೀಪದಲ್ಲೇ ಈ ಡ್ಯಾಂ ನಿರ್ಮಾಣಕ್ಕೆ ಡಿ.ಕೆ.ಶಿವಕುಮಾರ್​​​ ಮುತುವರ್ಜಿ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಆನಂದ್​ ಸಿಂಗ್ ಅವರು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ಭೇಟಿ ವೇಳೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಸಚಿವ ಆನಂದ್ ಸಿಂಗ್, ಡಿಕೆಎಸ್ ಭೇಟಿ ಮಾಡಿದ್ದು ಬಿಜೆಪಿಗರನ್ನು ಕೆರಳಿಸುವಂತೆ ಮಾಡಿದೆ.

error: Content is protected !!