February 21, 2026

Newsnap Kannada

The World at your finger tips!

varalakshmi

ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ವಿಧಿವಶ

Spread the love

ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ಕಳೆದ ರಾತ್ರಿ ವಿಧಿವಶರಾದರು.

ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ವರಲಕ್ಷ್ಮಿ ಬಳಲುತ್ತಿದ್ದರು ಎನ್ನಲಾಗಿದೆ. ಮೃತರ ಅಂತ್ಯಕ್ರಿಯೆ ಇಂದು ( ಜ. 6) ದೇವನಹಳ್ಳಿ ತೋಟದಲ್ಲಿ ನಡೆಯಲಿದೆ.

ಈ ಹಿಂದೆ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ದಿನೇಶ್ ಗುಂಡೂರಾವ್ ಅವರ ತಾಯಿ‌ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

error: Content is protected !!