ಸಮುದಾಯ ಆರೋಗ್ಯ ಸೇವೆಯ ಡಿಪ್ಲೊಮಾ ಕೋರ್ಸ್ ಅಗತ್ಯ: ಬೊಮ್ಮಾಯಿ ಅಭಿಮತ

Team Newsnap
1 Min Read
BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಸಮುದಾಯ ಆರೋಗ್ಯ ಸೇವೆಯ ಡಿಪ್ಲೊಮಾ ಕೋರ್ಸ್ ಅರಂಭಿಸುವ ಅವಶ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅತ್ಯಾಧುನಿಕ ಜೀವ ರಕ್ಷಣಾ ವ್ಯವಸ್ಥೆ ಇರುವ 120 ಆಂಬುಲೆನ್ಸ್ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವೆ ನೀಡಿ ಸಿಎಂ ಮಾತನಾಡಿದರು.


ಅಪೌಷ್ಟಿಕತೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಮುದಾಯ ಆರೋಗ್ಯ ಸೇವಾ ಕ್ಷೇತ್ರದತ್ತ ಆದ್ಯತೆ ನೀಡಬೇಕು. ಇದಕ್ಕಾಗಿ ಅಗತ್ಯ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಬೇಕು. ಈ ಉದ್ದೇಶಕ್ಕಾಗಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಾಗಿದೆ ಎಂದು ಹೇಳಿದರು.


ಈ ಹಿಂದೆ ರೋಗಿಗಳನ್ನು ಕರೆದೊಯ್ಯಲು ಆಂಬುಲೆನ್ಸ್ ಬಳಕೆಯಾಗುತ್ತಿತ್ತು. ಆದರೆ ಈಗ ಆಂಬುಲೆನ್ಸ್ನಲ್ಲೇ ಚಿಕಿತ್ಸೆ ನೀಡುವ ವ್ಯವಸ್ಥೆಯೂ ಇದೆ. ಇದು ಮತ್ತಷ್ಟು ಸದೃಢವಾಗಬೇಕು. ಇದರಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಅಲಸ್ಯ ತೋರಬಾರದು. ಸೇವಾ ಮನೋಭಾವ ಮೈಗೂಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.


ರಾಜ್ಯದಲ್ಲಿ ಕೋವಿಡ್-೧೯ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಹಿಂದಿನ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಅತ್ಯುತ್ತಮವಾಗಿ ಕಾರ್ಯನಿರ್ವಹಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಬೊಮ್ಮಾಯಿ ಮೆಚ್ಚುಗೆ ಮಾತುಗಳನ್ನಾಡಿದರು.


ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಕಾರಣ ಆರೋಗ್ಯಕ್ಕೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆ ಅಗತ್ಯವಿದೆ. ರಾಜ್ಯರಾಜಧಾನಿಯಲ್ಲಿ ಒಂದೇ ಪ್ರಾಧಿಕಾರದಡಿ ಆರೋಗ್ಯ ಸೇವೆ ಕೊಡಬೇಕಾಗಿದೆ ಎಂದು ತಿಳಿಸಿದರು.

Share This Article
Leave a comment