December 22, 2024

Newsnap Kannada

The World at your finger tips!

KGF,director,donation

ಸ್ವಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರು ದೇಣಿಗೆ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್​

Spread the love

ಕನ್ನಡದ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್​ ತಮ್ಮ ಹುಟ್ಟೂರು ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆ (ಅನಂತಪುರಂ) ಮಡಕಶಿರಾ ವಿಧಾನಸಭಾ ಕ್ಷೇತ್ರದ ನೀಲಕಂಠಪುರಂ ನಿರ್ಮಾಣ ಮಾಡಲಾಗುತ್ತಿರುವ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರು ದೇಣಿಗೆ ನೀಡಿದ್ದಾರೆ.

ಪ್ರಶಾಂತ್ ನೀಲ್​ ಸಂಬಂಧಿ, ಮಾಜಿ ಸಚಿವ ರಘುವೀರ್ ರೆಡ್ಡಿ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದಾರೆ.ಇದನ್ನು ಓದಿ –ಸಚಿವ ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಚಿವ ಮುನಿರತ್ನ

75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಜೊತೆ ಪ್ರಶಾಂತ್ ನೀಲ್ ಅವರ ತಂದೆಯ 75ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಿರ್ದೇಶಕರು ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಿದ್ದರು.

ಈ ವೇಳೆ ರಘುವೀರ್ ರೆಡ್ಡಿ ನೇತೃತ್ವದಲ್ಲಿ ನಿರ್ಮಾಣ ಮಾಡಲಾಗಿದ್ದ ದೇವಾಲಯಕ್ಕೂ ನೀಲ್ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದರು. ಇದೇ ವೇಳೆ ತಮ್ಮ ಊರಿನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಎಲ್​​ವಿ ಪ್ರಸಾದ್​​ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರು ದೇಣಿಗೆ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!