ಕನ್ನಡದ ನಿರ್ಮಾಪಕ, ನಿರ್ದೇಶಕ ಕಲಾಸಾಮ್ರಾಟ್ ಎಸ್. ನಾರಾಯಣ್ ಅಧಿಕೃತ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು, ಸ್ನೇಹಿತರಿಗೆ ಹಣದ ಬೇಡಿಕೆ ಇಟ್ಟಿದ್ದಾರೆ.
ಖಾತೆ ಹ್ಯಾಕ್ ಆಗಿರುವ ಬಗ್ಗೆ ಎಸ್. ನಾರಾಯಣ್ ಫೇಸ್ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದಾರೆ
ನನ್ನ ಹೊಸ ಚಿತ್ರ 5ಡಿ ಟ್ರೈಲರ್ ರಿಲೀಸ್ ಸಮಯದಲ್ಲಿ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಯಾರು ನನ್ನ ಹೆಸರು ಹೇಳಿಕೊಂಡು ಹಣ ಕೇಳಿದರೆ ಹಾಕಬೇಡಿ ಎಂದಿದ್ದಾರೆ.
ಮೋಸ ಮಾಡೋದಕ್ಕಾಗಿಯೇ ನನ್ನ ಖಾತೆಯನ್ನು ಹ್ಯಾಕ್ ಮಾಡಿದ್ದಾರೆ. ಯಾರಾದರು ಅಪ್ಪಿ ತಪ್ಪಿ ಮೋಸ ಹೋದರೆ ನಾನು ಜವಾಬ್ದಾರನಾಗಿರುವುದಿಲ್ಲ. ಜೊತೆಗೆ ಈ ಕುರಿತು ಸೈಬರ್ ಕ್ರೈಂಗೆ ದೂರು ನೀಡಲು ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್