ಬೆಂಗಳೂರು: ರಾಜ್ಯವು ಈಗ ಸಂಪೂರ್ಣ ನಕ್ಸಲ್ ಮುಕ್ತವಾಗಿದೆ ಎಂಬ ಕಾರಣದಿಂದ ನಕ್ಸಲ್ ನಿಗ್ರಹ ಪಡೆಯನ್ನು (Anti Naxal Force) ವಿಸರ್ಜನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ಶರಣಾಗಿದ್ದು, ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳವನ್ನು ವಿಸರ್ಜನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ, ಮತ್ತು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು, 10 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ.ಇದನ್ನು ಓದಿ –ಪ್ರಾಜೆಕ್ಟ್ Majestic – ಹೈಟೆಕ್ ರೂಪ ಪಡೆಯಲಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ
ಸೈಬರ್ ಅಪರಾಧ ನಿಯಂತ್ರಣಕ್ಕೆ 5 ಕೋಟಿ ರೂ. ಅನುದಾನ
ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಮತ್ತು ಮಾದಕ ದ್ರವ್ಯಗಳ ಬಳಕೆ ಹಾಗೂ ವ್ಯಾಪಾರವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ, ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗವನ್ನು ಬಲಗೊಳಿಸಲು 5 ಕೋಟಿ ರೂ. ಅನುದಾನ ಮಂಜೂರು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು