- ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು
- ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು
- ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಬಿ ಚಂದ್ರೇಗೌಡ
ಚಿಕ್ಕಮಗಳೂರು:
ಮಾಜಿ ಸಚಿವ ಡಿ ಬಿ ಚಂದ್ರೇಗೌಡ (87 ) ಅವರು ತೀವ್ರ ಅನಾರೋಗ್ಯದಿಂದ ಕಳೆದ ರಾತ್ರಿ ದಾರದಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದರು.
ಮೂಡಿಗೆರೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ (ಬುಧವಾರ) ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ರಾಜಕೀಯದಲ್ಲಿ ಹೆಜ್ಜೆ ಗುರುತು :
ಬಿ ಎ ಎಲ್ ಎಲ್ ಬಿ ವ್ಯಾಸಂಗ ಮಾಡಿದ್ದ ಡಿ ಬಿ ಚಂದ್ರೇಗೌಡ, 1971 ಹಾಗೂ 1977 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಅಯ್ಕೆಯಾಗಿದ್ದರು. ಇದಕ್ಕೂ ಮೊದಲು ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಮುಂದಾಗಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷದಲ್ಲಿದ್ದ ದಿ ಬಿ ಚಂದ್ರೇಗೌಡ ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ನೀಡುವ ಮೂಲಕ ಇಂದಿರಾ ಗಾಂಧಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು.
ಆ ಚುನಾವಣೆಯಲ್ಲಿ ಇಂದಿರಾಗಾಂಧಿ ಗೆಲುವು ಸಾಧಿಸಿದ್ದರು. ಇದಲ್ಲದೆ, ಜೀವನದ ಹೆಚ್ಚಿನ ಸಮಯವನ್ನು ರಾಜಕೀಯದಲ್ಲಿ ಕಳೆದಿದ್ದ ಚಂದ್ರೇಗೌಡರು ತೀರ್ಥಹಳ್ಳಿ ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು