ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮೂಂದೂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಬುಧವಾರ ತಿಳಿಸಿದರು.
ನಾಗಮಂಗಲ ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರುವ ಆಶಾ ಭಾವನೆ ಇತ್ತು, ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿರುವ ಹಿನ್ನಲೆ ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ.
ಈ ಹಿನ್ನಲೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನವನ್ನು ಮತ್ತೆ ನಮ್ಮ ರಾಜ್ಯದ ಪರ ವಕೀಲರ ಮೂಲಕ ಮುಂದೂವರೆಸುವುದಾಗಿ ಸಚಿವರು ತಿಳಿಸಿದರು.ಉದಯನಿಧಿ ಪ್ರಿಯಾಂಕ್ ಖರ್ಗೆ ವಿರುದ್ಧ ಉ.ಪ್ರದೇಶದಲ್ಲಿ FIR ದಾಖಲು
ಕೆ.ಆರ್.ಎಸ್ ಅಣೆಕಟ್ಟಿನಲ್ಲಿ ಸದ್ಯ ಸಂಗ್ರಹವಾಗಿರುವ ನೀರು ಜನರಿಗೆ ಕುಡಿಯುವ ನೀರು ಮಾತ್ರ ಒದಗಿಸಲು ಸಾಧ್ಯವಾಗುತ್ತದೆ, ರೈತರ ಬೆಳೆಗಳಿಗೂ ನೀರು ಬಿಡದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆ ಪ್ರಾಧಿಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರೆಸುವುದಾಗಿ ಸಚಿವರು ತಿಳಿಸಿದರು.
- ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
- ಕನ್ನಡ ರಾಜ್ಯೋತ್ಸವ
- 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
- ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್
- ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರಿ ಮಳೆ ಸಂಭವ
- ಒಂದೇ ಗ್ರಾಮದ 350 ರೈತರ 960 ಎಕರೆ ಜಮೀನು ವಕ್ಫ್ ಬೋರ್ಡ್ಗೆ ಸೇರ್ಪಡೆ – ರೈತರ ತೀವ್ರ ಆಕ್ರೋಶ
More Stories
ಮನೆ ಬಾಗಿಲು ಒಡೆದು ಕಳುವು : 1.30 ಲಕ್ಷ ನಗದು ದೋಚಿದ ಖದೀಮರು
ಕನ್ನಡ ರಾಜ್ಯೋತ್ಸವ
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ