crime

ಪತಿಯ ಸಾವಿನಿಂದ ಜಿಗುಪ್ಸೆ: ಕುಟುಂಬದ ಮೂವರು ಆತ್ಮಹತ್ಯೆ – ನೆಲಮಂಗಲದಲ್ಲಿ ದುರಂತ

ರಾಜಧಾನಿಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ ದುರಂತ ತಲ್ಲಣವಾಗುವಂತೆ ಮಾಡಿದೆ.

ಗಂಡ ಸಾವಿನ‌ ಜಿಗುಪ್ಸೆಯಲ್ಲಿ ಇಬ್ಬರು ಮಕ್ಕಳ ಸಮೇತ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ಪ್ರಕೃತಿ ಲೇಔಟ್​​ನಲ್ಲಿ ಜರುಗಿದೆ.

ಮೃತರನ್ನು ವಸಂತಾ(40), ಯಶವಂತ್ (15) ಹಾಗೂ ನಿಶ್ಚಿತಾ (6) ಎಂದು ಗುರುತಿಸಲಾಗಿದೆ.

ಕಳೆದ ಐದು ತಿಂಗಳ ಹಿಂದೆ ಮಾರಕ ಕೊರೋನಾದಿಂದ ಮನೆಯ ಯಜಮಾನ, ಪತಿ ಪ್ರಸನ್ನ ಕುಮಾರ್ ಬಲಿಯಾಗಿದ್ದರು.

ಕೆಎಸ್ ಆರ್ ಟಿಸಿ ಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಪ್ರಸನ್ನ ಕುಮಾರ್ ಸಾವಿನಿಂದ ಜೀವನ ನಡೆಸಲಾಗದೇ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಮನೆ ಸಾಲ ಕಟ್ಟಲು ಸಾಧ್ಯವಾಗದೇ ಸ್ವಾಭಿಮಾನ ಕ್ಕೆ ಅಂಜಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.

ನಿತ್ಯ ಜೀವನ ನಡಸುವುದು ಕಷ್ಟವಾಗಿದೆ ಎನ್ನುವ ‌ನಕಾರಣಕ್ಕೆ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಈ ಕುಟುಂಬ ಪ್ರಯತ್ನ ಮಾಡಿತ್ತು.

ಮನೆಯಲ್ಲೇ ತಾಯಿ ಹಾಗೂ ಇಬ್ಬರು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024