ಇತ್ತೀಚೆಗಷ್ಟೇ ಲೋಕಾಯುಕ್ತದ ವಿಚಾರಣೆಯನ್ನು ಎದುರಿಸಿದ ಸಿಎಂಗೆ ಈಗ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಯ ಭೀತಿ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯನವರಿಬ್ಬರ ಆಪ್ತರಿಗೆ ಇ.ಡಿಯಿಂದ ಸಮನ್ಸ್ ನೀಡಲಾಗಿದ್ದು, ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಸೇರಿ ಏಳು ಮಂದಿಗೆ ತುರ್ತು ವಿಚಾರಣೆಗೆ ಹಾಜರಾಗುವಂತೆ ಇ.ಡಿ ನೋಟಿಸ್ ನೀಡಿದೆ.
ಮುಡಾ ಮಾಜಿ ಆಯುಕ್ತ ದಿನೇಶ್ ಮತ್ತು ನಟೇಶ್ ಅವರಿಗೆ ಮತ್ತೊಮ್ಮೆ ಸಮನ್ಸ್ ನೀಡಲಾಗಿದ್ದು, ಅವರ ವಿಚಾರಣೆ ನಂತರ ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.
ಇನ್ನು, ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ಸ್ನೇಹಮಯಿ ಕೃಷ್ಣ ಎಂಬವರು ಲೋಪದೂರು ನೀಡಿದ್ದು, ಲೋಕಾಯುಕ್ತ ಎಸ್ಪಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ್ದಾರೆ ಎಂಬ ಆಕ್ಷೇಪಣೆಗಳು ಕೇಳಿಬಂದಿವೆ.
ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಸಿದ ದೂರಿನಲ್ಲಿ ಉದೇಶ್ ಅವರಿಗೆ ಎಚ್ಚರಿಕೆ ನೀಡಬೇಕೆಂದು ಉಲ್ಲೇಖಿಸಲಾಗಿದೆ.
ಮುಡಾ ಕೇಸಿನಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಬಾಮೈದ ,ಪಾರ್ವತಿ ಸಿದ್ದರಾಮಯ್ಯ, ಜಮೀನು ಮಾರಾಟಗಾರ ದೇವರಾಜ್ ಅವರ ವಿಚಾರಣೆಯನ್ನು ಲೋಕಾಯುಕ್ತ ಈಗಾಗಲೇ ನಡೆಸಿದೆ.ಇದನ್ನು ಓದಿ –ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರಿನ ಕಚೇರಿಯಲ್ಲಿ ದೀರ್ಘ ಸಮಯದ ವಿಚಾರಣೆಗೆ ಒಳಪಡಿಸಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು