December 26, 2024

Newsnap Kannada

The World at your finger tips!

mysor web

ಮೈಸೂರು ದಸರಾ ವೆಬ್ ಸೈಟ್ ಉದ್ಘಾಟಿಸಿದ ಜಿಲ್ಲಾ ಮಂತ್ರಿ ಸೋಮಶೇಖರ್

Spread the love

ವಿಶ್ವವಿಖ್ಯಾತ ಮೈಸೂರು ದಸರಾ 2021ರ ದಸರಾ ವೆಬ್ ಸೈಟ್ ಅನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಬೆಳಗ್ಗೆ ಮೈಸೂರು ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ.

ದಸರಾ ಕಾರ್ಯಕ್ರಮಗಳು ವರ್ಚುವಲ್ ಆಗಿ ಪ್ರಸಾರವಾಗಲಿದೆ. ವೆಬ್‌ ಸೈಟ್, ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಕಾರ್ಯಕ್ರಮಗಳು ನೇರಪ್ರಸಾರವಾಗಲಿದೆ ಎಂದು ಹೇಳಿದರು.

ಜಂಬೂ ಸವಾರಿ, ಮೆರವಣಿಗೆ, ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಮೈಸೂರು ಅರಮನೆ, ಮೃಗಾಲಯ ನಡೆದು ಬಂದ ಹಾದಿ ಸೇರಿದಂತೆ ಸಂಪೂರ್ಣ ವಿವರಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಲಭ್ಯವಾಗಲಿದೆ.

ದಸರಾ ಹಿನ್ನೆಲೆ, ಉದ್ಘಾಟಕರ ಪರಿಚಯ, ಉಪಸಮಿತಿಗಳ ವಿವರ, ಕಾರ್ಯಕ್ರಮಗಳ ಪಟ್ಟಿ, ಹಿಂದಿನ ದಸರಾ ಮಹೋತ್ಸವದ ಫೋಟೋ, ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರಲಿದೆ. ದೇಶಿ-ವಿದೇಶಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂಗ್ಲಿಷ್ ನಲ್ಲಿ ಕೂಡ ಮಾಹಿತಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಮೂರನೇ ಅಲೆ ಹಾಗೂ ಮೈಸೂರು ಜನತೆಯ ಹಿತದೃಷ್ಟಿಯಿಂದ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಎಲ್ಲೂ ಕೂಡ ಕೋವಿಡ್ ನಿಯಮಗಳನ್ನು ಮೀರದಂತೆ ಸುರಕ್ಷಿತವಾಗಿ ದಸರಾ ಆಚರಣೆ ಮಾಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಡಿಸಿಪಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಕುಮಾರ್, ವೆಬ್‌ಸೈಟ್ ನೊಡೆಲ್ ಅಧಿಕಾರಿ ಆರ್.ರಾಜು, ಜಿಲ್ಲಾ ಎನ್‌.ಐ.ಸಿ ಅಧಿಕಾರಿ ಸುದರ್ಶನ್, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಕಾವಾಡಿಗರು, ಮಾವುತರೊಂದಿಗೆ ಉಪಹಾರ :

ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.1ರ ಶುಕ್ರವಾರ ಬೆಳಗ್ಗೆ ಮಾವುತರು ಹಾಗೂ ಕಾವಾಡಿಗರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸಿದರು.

mavutha

ಕಾವಾಡಿಗರು ಹಾಗೂ ಮಾವುತರಿಗೆ ಸ್ವತಃ ಸಚಿವರೇ ಉಪಹಾರ ಬಡಿಸಿದರು. ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿ ಅವರ ಯೋಗಕ್ಷೇಮ ವಿಚಾರಿಸಿದರು.

Copyright © All rights reserved Newsnap | Newsever by AF themes.
error: Content is protected !!