ಬೆಂಗಳೂರು : ಉದ್ಯಾನನಗರಿಯಲ್ಲಿ ಹವಾಮಾನ ಗುಣಮಟ್ಟ ತೀವ್ರಪ್ರಮಾಣದಲ್ಲಿ ಕುಸಿದಿದೆ ಎಂದು ವರದಿಯೊಂದು ಹೇಳಿದೆ.
ಬೆಂಗಳೂರಿನ ಜನತೆ ಕಳೆದ 2 ದಿನಗಳಿಂದ ದೀಪಾವಳಿ ಸಂಭ್ರಮಾಚರಣೆಯಲ್ಲಿದ್ದಾರೆ ಉದ್ಯಾನ ನಗರಿಯಲ್ಲಿನ ವಾಯು ಗುಣಮಟ್ಟ ಸೂಚ್ಯಂಕ 193ಕ್ಕೇರಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ ವರದಿ ಮಾಡಿದೆ.
ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟದಿಂದ ಉಸಿರಾಟದ ತೊಂದರೆ ಅಥವಾ ಗಂಟಲಿನ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ನೀವು ಅನುಭವಿಸುತ್ತಿದ್ದರೆ ಅನಾವಶ್ಯಕ ಹೊರಗಿನ ಓಡಾಟ ತಪ್ಪಿಸಿ ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.
ಬೆಂಗಳೂರಿನ ಇಂದಿನ ವಾಯು ಗುಣಮಟ್ಟ PM 2.6 193 ಆಗಿದ್ದು, PM 10 (Particulate Matter)ನ ಪ್ರಮಾಣ 152ರಷ್ಟಿದೆ. ಈ ಎರಡೂ ಅಂಶಗಳ ಪ್ರಮಾಣ ತುಂಬಾ ಅನಾರೋಗ್ಯಕರ ಎಂದು ಆ್ಯಕ್ಯುವೆದರ್ ವರದಿ ಮಾಡಿದೆ.
More Stories
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು