ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ದೀಪಾವಳಿ ಹಬ್ಬದ ಬಂಪರ್ ಕೊಡುಗೆ ನೀಡಿದೆ.
ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ
ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆಅನುಕೂಲವಾಗಲಿದೆ.
ಸದ್ಯ ಮೂಲವೇತನ ಆಧರಿಸಿ ಶೇ. 21.50ರಷ್ಟು ತುಟ್ಟಿ ಭತ್ಯೆ (ಡಿಎ) ನೀಡಲಾಗುತ್ತಿದೆ. ಹೊಸದಾಗಿ ಡಿಎ ಹೆಚ್ಚಳದಿಂದ ಇನ್ನು ನೌಕರರು ಮೂಲವೇತನದ ಶೇ. 24.50ರಷ್ಟು ತುಟ್ಟಿ ಭತ್ಯೆ ಪಡೆಯಲಿದ್ದಾರೆ. ನಿವೃತ್ತ ಸರ್ಕರಿ ನೌಕರಿಗೂ ಇದು ಅನ್ವಯವಾಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು