ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಉದ್ಯಮಿ ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆಗೆ ಗುರುವಾರ ನಿಶ್ಚಿತಾರ್ಥ ನೆರವೇರಿತು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ತಾಜ್ ಹೋಟೆಲ್ 250 ಗಣ್ಯರ ಸಮ್ಮುಖದಲ್ಲಿ ನೆರವೇರಿತು.
ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.
ಮುಖ್ಯ ಮಂತ್ರಿ ಯಡಿಯೂರಪ್ಪ. ಸಚಿವರಾದ ಆರ್ .ಅಶೋಕ್, ಡಾ, ಸುಧಾಕರ್ ಸೇರಿದಂತೆ ಕೆಲವು ಗಣ್ಯರು ಐಶ್ವರ್ಯ ಹಾಗೂ ಅಮಥ್ಯ ೯ ಹೆಗ್ಡೆ ಶುಭಾ ಹಾರೈಸಿದರು.
ಇಬ್ಬರೂ ಬ್ಯುಸಿನೆಸ್ ನೋಡಿ ಕೊಳ್ಳುತ್ತಾರೆ :
ಅಮರ್ಥ್ಯ ಅಮೇರಿಕಾದಲ್ಲಿ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯ ಅವರು ಇಂಜಿನಿಯರಿಂಗ್ ಮಾಡಿ, ಡಿಕೆಶಿಗೆ ಸೇರಿದ ಕಾಲೇಜು ನೋಡಿಕೊಳ್ಳುತ್ತಿದ್ದಾರೆ.
ಅಮರ್ಥ್ಯ ಕಾಫಿ ಡೇ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ . ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ. ಡಿಕೆಶಿ ಮತ್ತು ಸಿದ್ದಾರ್ಥ ಇಬ್ಬರು ಬ್ಯುಸಿನೆಸ್ ಪಾರ್ಟನರ್ ಕೂಡ ಆಗಿದ್ದರು. ಸಿದ್ಧಾರ್ಥ ಹೆಗಡೆ ಆಘಾತಕಾರಿ ರೀತಿಯಲ್ಲಿ ಸಾವನ್ನಪ್ಪಿದಾಗ ಡಿ.ಕೆ. ಶಿವಕುಮಾರ್ ಕುಟುಂಬ ಸಿದ್ಧಾರ್ಥ ಹೆಗಡೆ ಕುಟುಂಬದ ಜೊತೆಗಿದ್ದು, ಧೈರ್ಯ ತುಂಬಿದ್ದರು.
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ