Trending

ಜೋಡೋ ಯಾತ್ರೆ ನಂತರ ಕೃಷ್ಣ ಯಾತ್ರೆ – ನನ್ನದೇ ನೇತೃತ್ವ : ಡಿಕೆಶಿ ಪ್ರಕಟ

ಮೇಕೆದಾಟು ಪಾದಯಾತ್ರೆ ಬಳಿಕ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶನಿವಾರ ಮಾಹಿತಿ ನೀಡಿದರು.

ಮಂಡ್ಯದ ಸುಮಾ ರವಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ನಾಯಕರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಂದು ಪಾದಯಾತ್ರೆಯ ಗುಟ್ಟು ರಟ್ಟು ಮಾಡಿದ
ಭಾರತ್ ಜೋಡೋ ಯಾತ್ರೆ ಬಳಿಕ ಕೃಷ್ಣ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ `ಕೃಷ್ಣ ಯಾತ್ರೆ’
ಹಮ್ಮಿಕೊಳ್ಳಲಾಗುತ್ತದೆ. ಈ ಬಗ್ಗೆ ಸ್ಥಳೀಯ ನಾಯಕರಿಗೂ ಹೇಳಿದ್ದೇನೆ ಎಂದರು. ಕಾಲೇಜ್ ಗೆ ಬಂಕ್ ಹಾಕಿ ಗೆಳೆಯನ ಜೊತೆ ಜಾಲಿ ಟ್ರಿಪ್ : ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು- ಗೆಳೆಯ ಬಚಾವ್

ಈ ಕೃಷ್ಣ ಯಾತ್ರೆ ತಯಾರಿ ಆರಂಭವಾಗಿಲ್ಲ. ಭಾರತ್ ಜೋಡೋ ಯಾತ್ರೆ ಮುಗಿದ ನಂತರ ನಾನೇ ನೇತೃತ್ವ ತೆಗೆದುಕೊಳ್ಳುತ್ತೇನೆ. ಕೃಷ್ಣ ನೀರಾವರಿ ಯೋಜನೆಗಾಗಿ ಪಾದಯಾತ್ರೆ ಮಾಡ್ತೇವೆ. ಈಗ ಭಾರತ್ ಜೋಡೋ ಯಾತ್ರೆ ಮುಗಿದ ನಂತರ ಅದರ ಚಿತ್ರಣ ಆ ಮೇಲೆ ಹೇಳ್ತೀನಿ ಎಂದು ವಿವರಿಸಿದರು

ನಮ್ಮದು 22 ದಿನಗಳ ಭಾರತ್ ಜೋಡೋ ಯಾತ್ರೆ. ಯಾತ್ರೆಗೆ ಯಾವ ಕಾರ್ಯಕರ್ತನೂ ಹೂವಿನ ಹಾರ ತರಬೇಡಿ, ಯಾರಿಗೂ ಹೂವಿನ ಹಾರ ಹಾಕಬೇಡಿ. ಹೂವಿನ ಹಾರ ಹಾಕಿಸಿಕೊಳ್ಳಲು ಪೊಲೀಸ್ ಹಾಗೂ ಸೆಕ್ಯೂರಿಟಿ ಬಿಡಲ್ಲ. ನಿಮ್ಮ ಅಭಿಮಾನ ಪ್ರೀತಿ ಜನ ಸಂಘಟನೆಯಲ್ಲಿ ಇರಲಿ ಎಂದು ತಿಳಿಸಿದರು.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024