ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ : ಶಿವ ಯೋಗೇಶ್ವರ ಸ್ವಾಮೀಜಿ

Team Newsnap
1 Min Read

ಮಂಡ್ಯ : ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಮದ್ದೂರಿನ ಕದಲೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿ ಸುದ್ದಿಗಾರರ ಜೊತೆ ಮಾತನಾಡಿ , ಡಿ.ಕೆ ಶಿವಕುಮಾರ್ ಖಂಡಿತ ಸಿಎಂ ಆಗುತ್ತಾರೆ ಎಂದು ಹೇಳಿದರು .

shiva yogeshwar swamiji

ಈ ಹಿಂದೆ ಹಲವು ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು .

ಇತ್ತೀಚೆಗೆ ಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಕೂಡ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಪಟ್ಟು ಹಿಡಿದಿದ್ದು, ಬಳಿಕ ಸಿದ್ದರಾಮಯ್ಯ ಸಿಎಂ ಹಾಗೂ ಡಿ ಕೆ ಶಿವಕುಮಾರ್ ಡಿಸಿಎಂ ಗೆ ಆಗಲು ಒಪ್ಪಿಕೊಂಡಿದ್ದರು.ಜನವರಿಯಲ್ಲಿ ಯುವ ನಿಧಿ – ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ಡಿ.ಕೆ. ಶಿವಕುಮಾರ್ ಸಿಎಂ ಆಗುವ ಅವಕಾಶವಿದೆ ಎಂದು ಚರ್ಚೆ ಮುನ್ನೆಲೆಗೆ ಬಂದಿದೆ.

Share This Article
Leave a comment