December 23, 2024

Newsnap Kannada

The World at your finger tips!

DKS

ಶಿವಮೊಗ್ಗದಲ್ಲಿ ಹತ್ಯೆಯಾದ ಹಿಂದೂ ಹಷ೯ ಮನೆಗೆ ಹೋಗುವೆ – ಡಿಕೆಶಿ​​

Spread the love

ಶಿವಮೊಗ್ಗದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹರ್ಷ ಅವರ ಮನೆಗೆ ನಾನು ಭೇಟಿ ನೀಡುವುದಾಗಿ ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್​ ತಿಳಿಸಿದರು

ರಾಮನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್,​ ಇಂತಹ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ. ಈ ಕುರಿತು ನಮ್ಮ ಜಿಲ್ಲಾ ಕಾಂಗ್ರೆಸ್​ ನಾಯಕರಿಂದ ಎಲ್ಲ ಮಾಹಿತಿ ಪಡೆದುಕೊಂಡಿದ್ದೇನೆ. ಯಾರು, ಯಾರನ್ನು ಸಾಯಿಸಬಾರದು. ಈ ಘಟನೆಯನ್ನು ನಾನು ಖಂಡಿಸುತ್ತೇನೆ.ಕೃತ್ಯದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು

ಈಗಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದೇವೆ ಇದು ಅಂತ್ಯಗೊಳ್ಳುತ್ತಿದ್ದಂತೆ ಹತ್ಯೆಗೀಡಾದ ಹರ್ಷ ಅವರ ಮನೆಗೆ ಹೋಗುವುದಾಗಿ ಹೇಳಿದ್ದಾರೆ. ಪೊಲೀಸರು ಕೂಡ ಈ ಪ್ರಕರಣದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸಬೇಕೆಂದು
ಡಿಕೆಶಿ ಒತ್ತಾಯಿಸಿದರು.

Copyright © All rights reserved Newsnap | Newsever by AF themes.
error: Content is protected !!