ದಿಢೀರ್ ಬೆಳವಣಿಗೆಯೊಂದರಲ್ಲಿ ಕನಕಪುರದಿಂದ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಇಂದು ಬೆಂಗಳೂರು ಪದ್ಮನಾಭನಗರದಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ದಿಢೀರ್ ಬೆಳವಣಿಗೆಯೊಂದರಲ್ಲಿ ಕನಕಪುರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ
ನಾಮಪತ್ರ ಸಲ್ಲಿಸಿದ್ದು ಯಾಕೆ?
ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ತಾಂತ್ರಿಕ ಕಾರಣದಿಂದ ತಿರಸ್ಕೃತವಾಗುವ ಭೀತಿ ಇರುವುದರಿಂದ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗುತ್ತದೆ. ಇಬ್ಬರು ಯಾಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂಬುದಕ್ಕೆ ಇಲ್ಲಿಯವರೆಗೆ ಯಾವುದೇ ಸ್ಪಷ್ಟವಾದ ಕಾರಣ ಸಿಕ್ಕಿಲ್ಲ. ಕಾಂಗ್ರೆಸ್ ನವರು ದುಡ್ಡು ಕೊಟ್ಟರೆ ಟೆರರಿಸ್ಟ್ ಗಳಿಗೂ ಟಿಕೆಟ್ ಕೊಡ್ತಾರೆ – ಗುರು ಚರಣ್
ಮಾಹಿತಿಗಳ ಪ್ರಕಾರ ಒಂದು ವೇಳೆ ಡಿಕೆಶಿ ನಾಮಪತ್ರ ತಿರಸ್ಕೃತವಾದರೂ ಸುರೇಶ್ ಅವರ ನಾಮಪತ್ರ ಸ್ವೀಕೃತವಾಗಿರುತ್ತದೆ ಎಂಬ ಕಾರಣಕ್ಕೆ ನಾಮಪತ್ರ ಸಲ್ಲಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು