ಡಿಕೆಶಿ ಅಕ್ರಮ ಆಸ್ತಿ ಪ್ರಕರಣ – ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ – ಸಿಬಿಐಗೆ ಆದೇಶ

Team Newsnap
1 Min Read

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ. CBI ತನಿಖೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ CBI ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. 

CBI ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ CBI ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.

ಮುಂದಿನ ಮೂರು ತಿಂಗಳಲ್ಲಿ ಪ್ರಕರಣದ ತನಿಖೆಯನ್ನು ಮುಗಿಸಬೇಕು ಎಂದು CBI ಗೆ ಸೂಚನೆ ನೀಡಿದೆ. 1,000 ಗೋಲ್ಡ್ ಕಾರ್ಡ್ ಸೇಲ್ : 89 ಲಕ್ಷ ವರಮಾನ

ತನಿಖೆ ನಿಧಾವಾದರೆ ಮತ್ತೆ ಪುನಃ ಆದೇಶ ನೀಡಬೇಕಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Share This Article
Leave a comment