ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾವ ತಿಮ್ಮಯ್ಯ(84) ವಯೋಸಹಜ ಕಾಯಿಲೆಯಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಯ್ಯ ಕೊನೆಯುಸಿರೆಳೆದಿದ್ದಾರೆ.. ನಾಳೆ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಡಿ.ಕೆ. ಶಿವಕುಮಾರ್ ಅವರು ಸಿಂದಗಿಯಲ್ಲಿ ಇಂದು ಹಾಗೂ ಹಾನಗಲ್ ನಲ್ಲಿ ನಾಳೆ ನಡೆಯಲಿರುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುತ್ತಿಲ್ಲ. ಎರಡೂ ಕ್ಷೇತ್ರಗಳ ಮತದಾರರು ಅನ್ಯಥಾ ಭಾವಿಸಬಾರದು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಿಂದಗಿಯ ಮಾದಿಗರ/ದಂಡೋರಾ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಹಾಗೂ ಅಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯ ಮುನ್ನ ವಿಷಯ ತಿಳಿದ ಶಿವಕುಮಾರ್ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಬಿಜಾಪುರದ ಮೂಲಕ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ