ಗ್ಯಾಸ್ ದರ ಏರಿಕೆ ವಿರೋಧಿಸಿ ಅಡುಗೆ ಮನೆಯಲ್ಲಿ ಡಿಕೆಶಿ ವಿಡಿಯೊ

Team Newsnap
1 Min Read

ಸಾಮಾನ್ಯವಾಗಿ ಪ್ರತಿಭಟನೆಗಳು, ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಪರೂಪಕ್ಕೆನ್ನುವಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಅಡುಗೆ ಮನೆಯಿಂದ ವಿಡಿಯೊ ಮಾಡಿ ಅದನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.


ಅದರಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳಕ್ಕೆ ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗ್ಬೇಕಾ…? ಎಂದು ತಮ್ಮ ವೀಡಿಯೋದಲ್ಲಿ ಕೇಳಿದ್ದಾರೆ. ಬೆಲೆ ಹೆಚ್ಚಳದಿಂದ ರೋಸಿಹೋದ ಜನರ ಅಭಿಪ್ರಾಯಕ್ಕೂ ತಾವು ಕಾಯುತ್ತಿರುವುದಾಗಿ ಹೇಳಿಕೊಂಡಿದ್ದರೆ. ಅಡುಗೆ ಅನಿಲದ ಸಿಲಿಂಡರ್ ಬೆಲೆ ಕನಿಷ್ಠ ೧೫೦ರೂ. ಆದರೂ ಇಳಿಕೆಯಾಗಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.


ಎಲ್‌ಪಿಜಿ ಸಿಲಿಂಡರ್ ಬೆಲೆ 888 ರೂ.ಗಳಿಂದ ಸದ್ಯದಲ್ಲೇ 900 ರಿಂದ 1000 ರೂ.ಕೂಡ ತಲುಪಬಹುದು. ರಾಜ್ಯದ ಜನತೆಗೆ ಎಂಥ ಸಂಕಷ್ಟ ನೋಡಿ……ರಾಜ್ಯದ ನಾನಾ ಭಾಗಗಳಲ್ಲಿ ನಾನು ತಿರುಗಾಡಿ ಬಂದಿದ್ದೇನೆ. ಬಡವರು, ಮಧ್ಯಮವರ್ಗದವರು, ಶ್ರೀಮಂತರು ಎಲ್ಲರನ್ನೂ ಭೇಟಿಯಾಗಿದ್ದೇನೆ. ಎಲ್ಲರೂ ಬೆಲೆ ಏರಿಕೆಯಿಂದ ಬೆಂದು ಹೋಗಿದ್ದಾರೆ….. ಬಡ ಕುಟುಂಬದವರ ಮುಂದೆ ಸದ್ಯಕ್ಕಿರುವ ಆಯ್ಕೆ ಎರಡೇ, ಒಂದೋ ಮಕ್ಕಳ ಶಾಲೆ ಫೀಸ್ ಕಟ್ಟಬೇಕಾ ಅಥವಾ ಗ್ಯಾಸ್ ಸಿಲಿಂಡರ್ ಖರೀದಿಸಬೇಕಾ? ಗ್ಯಾಸ್ ಸಿಲಿಂಡರ್‌ಗೆ ಹಣ ಇಲ್ಲದೆ ಎಷ್ಟೋ ಕುಟುಂಬಗಳು ಸೌದೆ ಒಲೆ ಮೊರೆಹೋಗುತ್ತಿದ್ದಾರೆ….

ಹೀಗೆ ತಮ್ಮ ಅನಿಸಿಕೆಯನ್ನು ತಿಳಿಸಿರುವ ಡಿಕೆಶಿ, ಕೊನೆಯದಾಗಿ ಹೇಳಿದ್ದಾರೆ, ..” ನಿಮ್ಮ ಅಭಿಪ್ರಾಯವನ್ನು ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಮೂಲಕ ತಿಳಿಸಿ. ನಾನು ನಿಮ್ಮ ಉತ್ತರವನ್ನು ನಿರೀಕ್ಷೆ ಮಾಡುತ್ತೇನೆ.’

Share This Article
Leave a comment